ಈದ್, ಮೊಹರಂಗೆ 2 ಗ್ಯಾಸ್ ಸಿಲಿಂಡರ್ ಉಚಿತವಾಗಿ ನೀಡಲಾಗುವುದು- ಜಮ್ಮು-ಕಾಶ್ಮೀರದಲ್ಲಿ ಅಮಿತ್ ಶಾ ಘೋಷಣೆ
ಜಮ್ಮು-ಕಾಶ್ಮೀರ: ಈದ್ ಮತ್ತು ಮೊಹರಂ ಸಂದರ್ಭದಲ್ಲಿ 2 ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು-ಕಾಶ್ಮೀರದಲ್ಲಿ ಘೋಷಿಸಿದ್ದಾರೆ.
ಜಮ್ಮು ಕಾಶ್ಮೀರದ ಮೆಂದಾರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಅಬ್ದುಲ್ಲಾ, ಮುಫ್ತಿ ಮತ್ತು ನೆಹರೂ-ಗಾಂಧಿ ಕುಟುಂಬವು 90 ರ ದಶಕದಿಂದಲೂ ಜಮ್ಮು-ಕಾಶ್ಮೀರದಲ್ಲಿ ಹಿಂಸಾಚಾರವನ್ನು ಹರಡಿದೆ. ಅದ್ರೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ ಕರ್ಫ್ಯೂ ಕೊನೆಗೊಳಿಸಿದೆ. ಇಲ್ಲಿನ ಯುವಕರ ಕೈಯಲ್ಲಿ ಕಲ್ಲಿನ ಬದಲು ಲ್ಯಾಪ್ ಟಾಪ್ ನೀಡಲಾಗಿದೆ” ಎಂದು ಹೇಳಿದ್ದಾರೆ.
ಈ ಚುನಾವಣೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಕುಟುಂಬಗಳ ಆಡಳಿತವನ್ನು ಕೊನೆಗೊಳಿಸಲಿದೆ. ಮೋದಿ ಬಂದ ನಂತರ ಒಬಿಸಿಗಳು, ಹಿಂದುಳಿದವರಿಗೆ ಮೀಸಲಾತಿ ಸಿಕ್ಕಿದೆ ಎಂದು ಅಮಿತ್ ಶಾ ಹೇಳಿದ್ದಾರೆ.