ಉಡುಪಿ: ಕೊಡಂಕೂರಿನ ಯುವತಿ ನಾಪತ್ತೆ

ಉಡುಪಿ, ಸೆ.23: ಮೂಲತಃ ದಾವಣಗೆರೆ ಜಿಲ್ಲೆ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಯುವತಿ ಆ. 23ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 3 ಇಂಚು ಎತ್ತರ, ಉದ್ದಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!