ಬೈಂದೂರು ಹಾಲು ಉತ್ಪಾದಕರ ಸ.ಸಂಘ: ವಾರ್ಷಿಕ ಸಾಮಾನ್ಯ ಮಹಾಸಭೆ

Oplus_131072

ಬೈಂದೂರು ಸೆ.24 : ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ ಇದರ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆ ಮಂಗಳವಾರ ಬೈಂದೂರು ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ ಇದರ ಅಧ್ಯಕ್ಷ ಬಿ ನಾರಾಯಣ ರಾವ್ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆಯ‌ ಅಧ್ಯಕ್ಷತೆ ವಹಿಸಿದ್ದರು.

ದ.ಕ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ವಿಸ್ತರಣಾಧಿಕಾರಿ ರಾಜಾರಾಮ ಅವರು 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆಯ‌ ಉದ್ದೇಶಿಸಿ ಮಾತನಾಡಿ, ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ ಕಳೆದ 38 ವರ್ಷಗಳಿಂದ ಅತೀ ಹಾಲು ಸಂಗ್ರಹಣೆಯಲ್ಲಿ ಮುಂಚೂಣಿಯ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರು. ಕಳೆದ ಸಾಲಿನಲ್ಲಿ 4.29,219 ಲಕ್ಷ ಲಾಭಗಳಿಸಿದೆ. ಅದರ ಹಿನ್ನೆಲೆಯಲ್ಲಿ ಸಂಘದ ಸದಸ್ಯರಿಗೆ ಶೇ 18% ಡೆವಿಡೆಂಟ್ ನೀಡಲು ನಿರ್ಧರಿಸಲಾಗಿದೆ ಎಂದರು.

ಕಳೆದ 38 ವರ್ಷಗಳಿಂದ ಸಂಘದ ಕಾರ್ಯನಿರ್ವಾಹಣಾಧಿಕಾರಿ ಸೇವೆ ಸಲ್ಲಿಸಿದ ರಾಮಚಂದ್ರ ಅವರಿಗೆ ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ ಸನ್ಮಾನಿಸಿ ಗೌರವಿಸಲಾಯಿತು.

ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ ಉಪಾಧ್ಯಕ್ಷ ಮಹಾಬಲೇಶ್ವರ ದೇವಾಡಿಗ, ಸಂಘದ ನಿರ್ದೇಶಕ ಮಂಡಳಿಯ ಸದಸ್ಯರಾದ ವಿ.ಟಿ ಅಬ್ರಹಂ (ದಾಸ್), ಮಂಜಪ್ಪ ಎ, ನಿತ್ಯಾನಂದ ಎಸ್, ದಾಸಪ್ಪ ಹವಾಲ್ದಾರ್, ನಾರಾಯಣ ಶೆಟ್ಟಿ ಮದ್ದೋಡಿ, ಸಾವಿತ್ರಿ ಶೆಡ್ತಿ, ಇಂದಿರಾ ಶೆಡ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ ಕಾರ್ಯನಿರ್ವಾಹಣಾಧಿಕಾರಿ ಲಲಿತಾ ಪೂಜಾರಿ 2023-24ನೇ ಸಾಲಿನ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕ ಗುರುರಾಜ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಹಾಲು ಪರೀಕ್ಷಕ ನಾಗರತ್ನ ಬೈಂದೂರು, ಜಗದಾಂಬಾ ಮದ್ದೋಡಿ ಸಹಕರಿಸಿದರು.

Leave a Reply

Your email address will not be published. Required fields are marked *

error: Content is protected !!