ಉಡುಪಿ: ಶಾರ್ಟ್ ಸರ್ಕ್ಯೂಟ್ ಚಲಿಸುತ್ತಿದ್ದ ಅಲ್ಟೋ ಕಾರಿನಲ್ಲಿ ಬೆಂಕಿ

Oplus_131072

ಉಡುಪಿ, ಸೆ.24: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.

ಉಡುಪಿಯ ಕಿನ್ನಿಮೂಲ್ಕಿಯ ಪೆಟ್ರೋಲ್ ಪಂಪ್ ಎದುರು ಭಾಗದ ರಸ್ತೆೆಯಲ್ಲಿ ಈ ಘಟನೆ ನಡೆದಿದೆ. ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಶಾರ್ಟ್‌ಸರ್ಕ್ಯೂಟ್ ಆಗಿದೆ. ಕೂಡಲೇ ಅವರು ಕಾರನ್ನು ಪಕ್ಕಕ್ಕೆೆ ನಿಲ್ಲಿಸಿ ಕಾರಿನಿಂದ ಹೊರಗೆ ಬಂದಿದ್ದಾರೆ.

ಈ ವೇಳೆ ಕಾರಿನ ಎದುರು ಭಾಗಕ್ಕೆೆ ಸಂಪೂರ್ಣ ಬೆಂಕಿ ಆವರಿಸಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಅವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಕಾರಿನ ಬ್ಯಾಟರಿಯಲ್ಲಿ ಶಾರ್ಟ್ ಸಕ್ಯೂಟ್ ಆದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಿಂದಾಗಿ ಕೆಲ ಕಾಲ ಟ್ರಾಾಫಿಕ್ ದಟ್ಟನೆ ಉಂಟಾಯಿತು. ಕಾರಿನ ಎದುರು ಭಾಗಕ್ಕೆೆ ಹಾನಿಯಾಗಿದೆ.

Leave a Reply

Your email address will not be published. Required fields are marked *

error: Content is protected !!