ಆರ್.ಆರ್.ನಗರ, ಶಿರಾ ಉಪ ಚುನಾವಣೆ – ಬಿಜೆಪಿ ಅಭ್ಯರ್ಥಿಗಳಿಗೆ ಮುನ್ನಡೆ
ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಬೆಳಗ್ಗೆ ಆರಂಭಗೊಂಡಿದ್ದು, ರಾಜರಾಜೇಶ್ವರಿ ನಗರ ನಾಲ್ಕನೇ ಹಂತದ ಮತ ಎಣಿಕೆ ಮುಕ್ತಾಯಗೊಂಡಿದ್ದು, 11000ಕ್ಕೂ ಹೆಚ್ಚು ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಮುನಿರತ್ನ ನಾಲ್ಕನೇ ಸುತ್ತಿನಲ್ಲಿ 23105 ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ. 2915 ಮತಗಳನ್ನು ಕುಸುಮಾ 11134 ಪಡೆದಿದ್ದಾರೆ. ಕೃಷ್ಣಮೂರ್ತಿ 623 ಮತಗಳನ್ನು ಪಡೆದಿದ್ದರು.
ಶಿರಾ ವಿಧಾನಸಭಾ ಕ್ಷೇತ್ರ ಎರಡನೇ ಸುತ್ತು ಬಿಜೆಪಿಯ ರಾಜೇಶ್ ಗೌಡ 6436 ,ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ 4729
ಮತಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಶಿರಾ ಕ್ಷೇತ್ರದಲ್ಲಿ ಕೇಂದ್ರ ಶಸ್ತ್ರಾಸ್ತ್ರ ಪಡೆ, ಕೆಎಸ್ಆರ್’ಪಿ ತುಕಡಿ ಮತ್ತು ಹಿರಿಯ ಅಧಿಕಾರಿಗಳನ್ನೊಳಗೊಂಡಂತೆ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮೂವರು ಡಿಸಿಪಿ, 8 ಎಸಿಪಿ, 41 ಇನ್ಸ್’ಪೆಕ್ಟರ್, 105 ಪಿಎಸ್ಐ, 179 ಎಎಸ್ಐ, 183 ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ 1670 ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.