ಉಪಚುನಾವಣೆ – ಹಲವು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿಯತ್ತ

ನವದೆಹಲಿ: ಕರ್ನಾಟಕದ ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಹಾರದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲೂ ಬಿಜೆಪಿ ಮೈತ್ರಿಕೂಟ ಮುನ್ನಡೆಯಲ್ಲಿದೆ. ಇದರ ಜೊತೆಗೆ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಉಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊoಡಿದ್ದಾರೆ.

ಮಧ್ಯಪ್ರದೇಶದಲ್ಲಿ ಒಟ್ಟು 28 ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, ಬಿಜೆಪಿ 18, ಕಾಂಗ್ರೆಸ್‌ 9, ಬಿಎಸ್‌ಪಿ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ಗುಜರಾತ್‌ನಲ್ಲಿ 8 ಕ್ಷೇತ್ರಗಳಿಗೆ ನಡೆದಿದ್ದು, 8 ರಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಉತ್ತರ ಪ್ರದೇಶದ 7 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ 5 ರಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ ಎರಡರಲ್ಲಿ ಎಸ್‌ಪಿ ಮುನ್ನಡೆಯಲ್ಲಿದೆ.

ಮಣಿಪುರದಲ್ಲಿ 5 ಕ್ಷೇತ್ರಗಳಲ್ಲಿ 1 ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿದ್ದು 3ರಲ್ಲಿ ಮುನ್ನಡೆಯಲ್ಲಿದೆ. ಒಬ್ಬರು ಪಕ್ಷೇತರ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ.

ಚತ್ತೀಸ್‌ಗಢ, ಹರ್ಯಾಣದಲ್ಲಿ ಒಂದು ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ಜಾರ್ಖಂಡ್‌ನಲ್ಲಿ 1 ಕ್ಷೇತ್ರದಲ್ಲಿ ಬಿಜೆಪಿ, ಇನ್ನೊಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ತೆಲಂಗಾಣದ ಒಂದು ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನ್ನಡೆಯಲ್ಲಿದ್ದಾರೆ.

ನಾಗಾಲ್ಯಾಂಡ್‌ನ 2 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಒಡಿಶಾದ ಎರಡು ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ.

ಬಿಹಾರದ ವಾಲ್ಮಿಖಿ ನಗರಕ್ಕೆ ನಡೆಯುತ್ತಿರುವ ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಯು ಮುನ್ನಡೆಯಲ್ಲಿದೆ.

Leave a Reply

Your email address will not be published. Required fields are marked *

error: Content is protected !!