ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಗಿತ: ನ.12 ರಂದು ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಕಳೆದ ಕೆಲವು ವರ್ಷಗಳಿಂದ ಪ್ರಾರಂಭವಾದ ಮಲ್ಪೆ – ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ 169ಎ ಅಗಲೀಕರಣ ಕಾಮಗಾರಿಯು ಪರ್ಕಳ ಭಾಗದಲ್ಲಿ ಸ್ಥಗಿತಗೊಂಡಿದ್ದು, ಇದರಿಂದ ನಿತ್ಯ ವಾಹನ ಸಂಚಾರಕ್ಕೆ, ಹಾಗೂ ಪರಿಸರದ ನಾಗರಿಕರಿಗೆ ತುಂಬಾ ಸಮಸ್ಯೆಯಾಗಿದೆ. ಸರಕಾರದ ವಿಳಂಬ ಧೋರಣೆಯನ್ನು ವಿರೋಧಿಸಿ ನ.12 ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ಪರ್ಕಳ ಗಾಂಧಿ ಮೈದಾನದಲ್ಲಿ ಪ್ರತಿಭಟನಾ ಸಭೆಯನ್ನು ಮಣಿಪಾಲ, ಪರ್ಕಳ ನಾಗರೀಕರ ಸಹಕಾರದಿಂದ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದೆ.

ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬ್ಲಾಕ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ,ಭಾಗವಹಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕಾಗಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ಧನ ಭಂಡಾರ್ಕಾರ್ ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!