ಕೇಂದ್ರ ಭೂಸಾರಿಗೆ ಮಂತ್ರಾಲಯ ಅಧಿಕಾರಿಗಳೊಂದಿಗೆ ಸಂಸದ ಬಿ.ವೈ ರಾಘವೇಂದ್ರ ಕಾಮಗಾರಿಗಳ ಚರ್ಚೆ

ಬೈಂದೂರು ಸೆ.28 : ಕೇಂದ್ರ ಭೂಸಾರಿಗೆ ಮಂತ್ರಾಲಯದ ಡೈರೆಕ್ಟರ್ ಜನರಲ್ ಧರ್ಮೇಂದ್ರ ಸಾರಂಗಿರವರು ಶುಕ್ರವಾರ ಶಿವಮೊಗ್ಗ ಜಿಲ್ಲೆಯ ರಾಷ್ಠ್ರೀಯ ಹೆದ್ದಾರಿ ಕಾಮಗಾರಿಗಳ ಪರಿವೀಕ್ಷಣೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರರವರು ನಗರದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳನ್ನು ಕ್ಷೇತ್ರದ ಜನತೆಯ ಪರವಾಗಿ ಸ್ವಾಗತಿಸಿ, ಅಧಿಕಾರಿಗಳೊಂದಿಗೆ ಸಭೆ ನೆಡೆಸಿ ಕ್ಷೇತ್ರದಲ್ಲಿ ಅಭಿವೃದ್ದಿಯಾಗುತ್ತಿರುವ ಹಾಗೂ ಆಗಬೇಕಾದ ಪ್ರಮುಖ ಕಾಮಗಾರಿಗಳ ಬಗ್ಗೆ ವಿಸ್ತಾರವಾಗಿ ಚರ್ಚಿಸಿದರು.

ಪ್ರಗತಿಯಲ್ಲಿರುವ ಕಾಮಗಾರಿಗಳಾದ ಸಿಗಂದೂರು ಸೇತುವೆ, ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ರಸ್ತೆ, ಹಾಗೂ ಸಾಗರ ಪಟ್ಟಣದ ಚತುಷ್ಪಥ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಚರ್ಚಿಸಿದರು. ಹಾಗೂ ಟೆಂಡರ್ ಪ್ರಕ್ರಿಯೆ ಮುಗಿದಿರುವ ಕಾಮಗಾರಿಗಳಾದ ಶಿವಮೊಗ್ಗ-ಆನಂದಪುರ 4 ಪಥದ ರಸ್ತೆ, ನೆಲ್ಲಿಸರದಿಂದ – ತೀರ್ಥಹಳ್ಳಿವರೆಗಿನ 4 ಪಥದ ರಸ್ತೆ, ಬೈಂದೂರು-ನಾಗೋಡಿವರೆಗಿನ ದ್ವಿಪಥ ರಸ್ತೆ, ಹಾಗು ಹೊಸೂರು & ತಾಳಗುಪ್ಪ ರ್ಯಲ್ವೇ ಮೇಲ್ಸೇತುವೆ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು.

2024-25ನೇ ಸಾಲಿಗೆ ಮಂಜೂರಾದ ಕಾಮಗಾರಿಗಳಾ ದ ಆಗುಂಬೆ ರಸ್ತೆ, ಆನಂದಪುರದಿಂದ ತಾಳಗುಪ್ಪ ವರೆಗಿನ ರಸ್ತೆ, ಸಾಗರದಿಂದ ಮರಕುಟಕವರೆಗಿನ ರಸ್ತೆ ಹಾಗು ಬೈಂದೂರಿನಿಂದ ರಾಣೆಬೆನ್ನೂರುವರೆಗಿನ ಬಾಕಿ ಉಳಿದಿರುವ ರಸ್ತೆಗಳ ಡಿ.ಪಿ.ಆರ್‌ಗಳಿಗೆ ಮಂಜೂರಾತಿ ಪಡೆಯುವ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸ ಲು ತಿಳಿಸಿದರು. ಮೇಗರವಳ್ಳಿಯಿಂದ ಸೋಮೇಶ್ವರದ ವರೆಗೆ ಆಗುಂಬೆ ಘಾಟಿಗೆ ಪರ್ಯಾಯವಾಗಿ 4 ಪಥದ ಟನಲ್ ರಸ್ತೆಯ ಡಿಪಿಆರ್ ತಯಾರಿಸುವ ಸಂಬಂದ ಕಾರ್ಯ ಸಾಧ್ಯತೆ ವರದಿಯನ್ನು ತಯಾರಿಸಿ ಸಲ್ಲಿಸಲು ಸಹ ರಾಷ್ಠ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ.

ವಿಧಾನ ಪರಿಷತ್ ಸದಸ್ಯರಾದ ಧನಂಜಯ ಸರ್ಜಿಯವರು ಕೇಂದ್ರ ಭೂಸಾರಿಗೆ ಮಂತ್ರಾಲಯದ ರೀಜನಲ್ ಆಫೀಸರ್ ನರೇಂದ್ರ ಶರ್ಮಾ, ರಾಷ್ಟ್ರೀಯ ಹೆದ್ದಾರಿ ಅಧೀಕ್ಷಕ ಇಂಜಿನಿಯರ್ ರಾಜೇಶ್, ಕಾರ್ಯಪಾಲಕ ಇಂಜಿನಿಯರ್ ದಿವಾಕರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!