ಕುಂದಾಪುರ: ಬೈಕ್‌ಗಳ ಮುಖಾಮುಖಿ ಡಿಕ್ಕಿ- ಯುವಕ ಮೃತ್ಯು ಇಬ್ಬರಿಗೆ ಗಾಯ

Oplus_131072

ಕುಂದಾಪುರ ಸೆ.29: ಇಲ್ಲಿನ ಹಂಗಳೂರಿನ ಸರ್ವಿಸ್ ರಸ್ತೆಯಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮೃತಪಟ್ಟ ಬೈಕ್ ಸವಾರ ಕುಂದಾಪುರದ ಬಾಳೆಹಿತ್ತು ನಿವಾಸಿ ವೆಂಕಟೇಶ್ ಅವರ ಪುತ್ರ, ಖಾಸಗಿ ಕಂಪನಿಯೊಂದರ ಉದ್ಯೋಗಿ ಶಶಾಂಕ್ ಮೊಗವೀರ (22) ಎಂದು ತಿಳಿದುಬಂದಿದೆ.

ಶಶಾಂಕ್ ಮೊಗವೀರ ಅವರು ನಿನ್ನೆ ರಾತ್ರಿ 11ರ ವೇಳೆಗೆ ಹಂಗಳೂರಿನ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಮನೆಗೆ ಹಿಂತಿರುಗುವ ಸಮಯದಲ್ಲಿ ಎದುರಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟರಲ್ಲಾಗಲೇ ಅವರು ವೈದ್ಯರು ಶಶಾಂಕ್ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಬುಲೆಟ್ ಸವಾರ ಮತ್ತು ಹಿಂದೆ ಕುಳಿತಿದ್ದ ಮಹಿಳೆಯೂ ಗಂಭೀರ ಗಾಯಗೊಂಡಿದ್ದು ಇಬ್ಬರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

error: Content is protected !!