ಕಾರ್ಕಳ: ಹೊಸ್ಮಾರು ಬಳಿ ಭೀಕರ ಅಪಘಾತ- ಒಂದೇ ಕುಟುಂಬದ ನಾಲ್ವರ ಮೃತ್ಯು

Oplus_131072

ಉಡುಪಿ: ಮೀನಿ‌ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.

ವೇಣೂರು ಗಾಂಧಿನಗರದ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದ ಬೈಕ್‌ಗೆ ಮೀನಿನ ಲಾರಿ ಡಿಕ್ಕಿ ಹೊಡೆದಿದೆ. ಈ ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಮೃತಪಟ್ಟ ದುರ್ದೈವಿಗಳು.
ಮೀನಾಕ್ಷಿ ಆಚಾರ್ಯ (32) ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!