ಉಡುಪಿ: ಕಿಟಕಿ ಸರಳಿಗೆ ನೇಣು ಹಾಕಿಕೊಂಡು ವ್ಯಕ್ತಿ ಆತ್ಮಹತ್ಯೆ
ಉಡುಪಿ, ಅ.2; ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ವೃದ್ಧರೊಬ್ಬರು ಯಾರೂ ಇಲ್ಲದ ಸಂದರ್ಭ ನೋಡಿ ಕಿಟಕಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕಿಕಟ್ಟೆ ಇಂದಿರಾನಗರದ 8 ನೇ ತಿರುವಿನಲ್ಲಿ ಮಂಗಳವಾರ ನಡೆದಿದೆ.
ವೃದ್ಧರನ್ನು ಹೊರ ಜಿಲ್ಲೆಯ 85 ವರ್ಷದ ಭೀಮಪ್ಪ ಎಂದು ಗುರುತಿಸಲಾಗಿದೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೇಖರ್, ಹರೀಶ್ ಮಾಳ ಘಟನಾ ಸ್ಥಳಕ್ಕೆ ಬಂದು ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಶವವನ್ನು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವು ನೀಡಿದರು.