ಮಹಾತ್ಮಾ ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ
ಉಡುಪಿ, ಅ.02 : ಮಹಾತ್ಮಾ ಗಾಂಧೀಜಿಯವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಗಾಂಧೀಜಿಯವರಿಗೆ ಗೌರವ ಸಲ್ಲಿಸುವ ಮೂಲಕ ಗಾಂಧಿ ಜಯಂತಿ ದಿನಾಚರಣೆಯನ್ನು ಅರ್ಥಪೂರ್ಣವಾಗಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.
ಅವರು ಇಂದು ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ & ಉಡುಪಿ ಜಿಲ್ಲಾ ಸಮಸ್ತ ಸಹಕಾರಿ ಇವರ ನೇತೃತ್ವದಲ್ಲಿ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರ, ಲಿಯೋ ಡಿಸ್ಟಿçಕ್ಟ್ 317 ಸಿ ಮತ್ತು ಕ್ರಿಶ್ಚಿಯನ್ ಪಿ.ಯು ಕಾಲೇಜು, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಚೇತನ ಹಾಗೂ ಲಂಬಾರ್ಡ್ ಮೆಮೋರಿಯಲ್ ಮಿಷನ್ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ಪುರಭವನದಲ್ಲಿ ನಡೆದ ಜಿಲ್ಲಾ ಮಟ್ಟದ 155 ನೇ ಗಾಂಧಿ ಜಯಂತಿ ಕಾರ್ಯಕ್ರಮದ ಸಮಾರೋಪ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಚರಕದ ರಾಟೆಗೆ ನೂಲು ಹಾಕುವ ಮೂಲಕ ಚಾಲನೆ ನೀಡಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಪ್ರತಿಯೊಬ್ಬರೂ ಬಹಿರಂಗ ಸ್ವಚ್ಛತೆಯ ಜೊತೆಗೆ ಅಂತರಂಗದ ಸ್ವಚ್ಛತೆಯನ್ನು ಹೊಂದಿರಬೇಕು. ಗಾಂಧೀಜಿಯವರ ಆತ್ಮಚರಿತ್ರೆಯನ್ನು ಓದಿದಾಗ ಅವರು ವಿಶ್ವ ನಾಯಕನಾಗಿ ಬೆಳೆಯುವ ಹಂತವನ್ನು ಹಾಗೂ ಇತರರ ಲೇಖನಗಳಲ್ಲಿ ಅವರ ಬದುಕಿನ ಏಳು-ಬೀಳುಗಳನ್ನು ಸಂಕ್ಷಿಪ್ತವಾಗಿ ಗಮನಿಸಿದಾಗ ಒಬ್ಬ ಸಾಮಾನ್ಯ ವ್ಯಕ್ತಿ ಮಹಾತ್ಮರಾಗಿರುವುದನ್ನು ಕಾಣಬಹುದಾಗಿದೆ ಎಂದರು. ಕೆಲಸಕ್ಕಾಗಿ ವಕೀಲ ವೃತ್ತಿಗೆ ದಕ್ಷಿಣ ಆಫ್ರಿಕಾಗೆ ತೆರಳಿದ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರಿಗೆ ಬ್ರಿಟಿಷರು ನೀಡುತ್ತಿದ್ದ ದಬ್ಬಾಳಿಕೆಯನ್ನು ಮನಗಂಡು ಹೋರಾಟಕ್ಕೆ ಇಳಿದ ಗಾಂಧೀಜಿ, ಬ್ರಿಟಿಷ್ ಅಧಿಕಾರಿಗಳು ಸಾಕಷ್ಟು ತೊಂದರೆ ನೀಡದರೂ ಸಹ ಅದನ್ನೆಲ್ಲಾ ಎದುರಿಸಿ ಹೋರಾಟ ಮಾಡಿ, ನಂತರ ಭಾರತಕ್ಕೆ ಬಂದು ಸ್ವಾತಂತ್ರö್ಯಕ್ಕಾಗಿ ಮುಂಚೂಣಿಯಲ್ಲಿ ನಿಂತ ಇವರು, ಬ್ರಿಟಿಷರು ಯುದ್ಧ ಮಾಡುವ ಸಂದರ್ಭದಲ್ಲಿ ಅಹಿಂಸಾ ಸತ್ಯಾಗ್ರಹವನ್ನು ಮಾಡಿ ಬ್ರಿಟಿಷರನ್ನು ಸೋಲಿಸುವ ಮೂಲಕ ಸ್ವಾತಂತ್ರö್ಯ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದರು ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ತಮ್ಮ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡಿದ್ದರು. ಸ್ವಚ್ಛತಾ ಕಾರ್ಯಗಳು ಕೇವಲ ಅವರ ದಿನಾಚರಣೆಗೆ ಮಾತ್ರ ಸೀಮಿತವಾಗಿರದೇ, ದೈನಂದಿನಗಳಲ್ಲಿಯೂ ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಅವರ ಶಿಸ್ತು, ಸಂಯಮ, ಸೇವಾ ಪರಿಕಲ್ಪನೆಯನ್ನು ಬಾಲ್ಯದಿಂದಲೇ ರೂಢಿಸಿಕೊಳ್ಳಬೇಕು ಎಂದರು.
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಪ್ರಸಾದ್ ರಾವ್ ಎಂ ಉಪನ್ಯಾಸ ನೀಡಿ ಮಾತನಾಡಿ, ಇಂದು ಭಾರತದ ಇತಿಹಾಸದಲ್ಲಿ ವಿಶೇಷವಾದ ದಿನ. ಮಹಾತ್ಮಾ ಗಾಂಧೀಜಿಯವರ ಜಯಂತಿಯ ಜೊತೆಗೆ ಅಂತಾರಾಷ್ಟಿçÃಯ ಮಟ್ಟದಲ್ಲಿ ಶಾಂತಿ ದಿನ ಹಾಗೂ ದಿಟ್ಟ ನಿರ್ಧಾರಗಳ ಅಸಮಾನ್ಯ ನಾಯಕರಾದ ಲಾಲ್ ಬಹದ್ದೂರು ಶಾಸ್ತಿçà ಯವರ ಜನ್ಮ ದಿನವೂ ಕೂಡ ಇಂದಾಗಿದ್ದು, ಗಾಂಧೀಜಿಯವರ ನ್ನು ಪ್ರೀತಿಸಲು ಹಲವಾರು ಕಾರಣಗಳಿವೆ. ಸರ್ವರನ್ನೂ ಸಮಾನ ರೀತಿಯಲ್ಲಿ ಕಾಣುವುದರೊಂದಿಗೆ ಸಮಾಜದಲ್ಲಿ ಮೇಲು-ಕೀಳು ಎಂಬ ಭಾವವನ್ನು ಹೋಗಲಾಡಿಸಲು ಶ್ರಮಿಸಿದರು. ವ್ಯಕ್ತಿಯನ್ನು ಗೌರವಿಸಿದರೆ, ದೇವರನ್ನು ಗೌರವಿಸಿದಂತೆ ಎಂಬ ಮನೋಭಾವ ಹೊಂದಿದ್ದ ಅವರು, ಹೋರಾಟವನ್ನು ಹಿಂಸಾ ಮಾರ್ಗವನ್ನು ಹೊರತುಪಡಿಸಿಯೂ ಅಹಿಂಸಾ ಮಾರ್ಗ, ಶಾಂತಿಯ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳುತ್ತಿದ್ದರು ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಚಿಂತನೆಗಳನ್ನು ಪಾಲಿಸುವುದರೊಂ ದಿಗೆ ಅವುಗಳನ್ನು ಜೀವನದುದ್ದಕ್ಕೂ ಅಳವಡಿಸಿ ಕೊಳ್ಳುವ ದೃಢ ನಿರ್ಧಾರ ಕೈಗೊಂಡು, ಯಶಸ್ವಿ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧೀ ಜಯಂತಿ ಅಂಗವಾಗಿ ಪ್ರೌಢ ಶಾಲಾ ವಿಭಾಗ, ಪದವಿ ಪೂರ್ವ ವಿಭಾಗ ಹಾಗೂ ಪದವಿ ಮತ್ತು ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲಾ ವಿಭಾಗದ ಸಾಕ್ಷಿ ಕುಲಾಲ್ ಪ್ರಥಮ, ಮೈತ್ರಿ ದ್ವಿತೀಯ ಹಾಗೂ ಶಿವಾನಿ ತೃತೀಯ ಸ್ಥಾನ, ಪದವಿ ಪೂರ್ವ ಶಿಕ್ಷಣ ವಿಭಾಗದ ರಕ್ಷಿತಾ ಭಟ್ ಪ್ರಥಮ, ಪನ್ನಿಧಿ ಡಿ. ಶೆಟ್ಟಿ ದ್ವಿತೀಯ ಹಾಗೂ ದಿವ್ಯ ತೃತೀಯ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ಭೀಮಾಂಬಿಕಾ ಪ್ರಥಮ, ಅಮಿಷಾ ದ್ವಿತೀಯ ಹಾಗೂ ಅಶ್ವಿನಿ ಡಿ.ಎಸ್ ತೃತೀಯ ಸ್ಥಾನ ಇವರಿಗೆ ನಗದು ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು ಹಾಗೂ ಗಾಂಧೀಜಿಯವರ ಸವಿನೆನಪುಗಳ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್‌ಪಿ ಎಸ್. ಟಿ ಸಿದ್ದಲಿಂಗಪ್ಪ, ಲಯನ್ಸ್ ಜಿಲ್ಲಾ ಗವರ್ನರ್ ಮೊಹಮ್ಮದ್ ಹನೀಫ್, ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಕೃಷ್ಣಯ್ಯ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಶೇರಿಗಾರ್, ಲಯನ್ಸ್ ಕ್ಲಬ್ ಉಡುಪಿ ಚೇತನ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಖಾ;ರಿಗಳು, ಸಿಬ್ಬಂದಿಗಳು, ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಪೌರಾಯುಕ್ತ ರಾಯಪ್ಪ ಸ್ವಾಗತಿಸಿದರೆ, ದಯಾನಂದ ನಿರೂಪಿಸಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ವಂದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ 7 ಗಂಟೆಗೆ ಜಿಲ್ಲಾಡಳಿತ ಹಾಗೂ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಗರದ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಬೆಳಗ್ಗೆ 8.30 ಕ್ಕೆ ನಗರದ ಪ್ರಮುಖ ಬೀದಿಗಳ ಮೂಲಕ ಸ್ವಚ್ಛತಾ ನಡಿಗೆ ಜಾಥಾವು ಸರ್ವೀಸ್ ಬಸ್ ನಿಲ್ದಾಣದ ಕ್ಲಾಕ್ ಟವರ್‌ನಿಂದ ಅಜ್ಜರಕಾಡಿನ ಪುರಭವನದ ವರೆಗೆ ನಡೆಯಿತು. ಜಾಥಾದಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್ನ ವಿದ್ಯಾರ್ಥಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ, ಸ್ವಚ್ಛತೆಯ ಘೋಷ ವಾಕ್ಯಗಳನ್ನು ದಾರಿಯುದ್ದಕ್ಕೂ ಸಾರಿದರು. ನಂತರ ಅಜ್ಜರಕಾಡು ಭುಜಂಗ ಶೆಟ್ಟಿ ಪಾರ್ಕ್ನ ಗಾಂಧಿ ಕಟ್ಟೆಯ ಬಳಿಯ ಗಾಂಧಿ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು.