ಬ್ರಹ್ಮಾವರ: ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿ ಸುಪ್ರಸಾದ್ ಶೆಟ್ಟಿ ಆಯ್ಕೆ
ಬ್ರಹ್ಮಾವರ : ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಯುವ ವಕೀಲ, ಸಂಘಟಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ಶಾನಾಡಿ ಉಮಾನಾಥ ಶೆಟ್ಟಿ, ನಿರ್ದೇಶಕರುಗಳಾಗಿ ಆಸ್ತಿಕ ಶಾಸ್ತ್ರಿ, ಸಂತೋಷ್ ಕುಮಾರ್ ಶೆಟ್ಟಿ, ಸನ್ಮತ್ ಕುಮಾರ್ ಜನ್ನಾಡಿ, ಸುಬ್ಬ ಬಿಲ್ಲವ, ರತ್ನಾಕರ ಗಾಣಿಗ, ವಸಂತಿ ಆರ್ ಶೆಟ್ಟಿ, ಹೇಮಲತಾ ಯು ಶೆಟ್ಟಿ, ಗೀತಾ ಶಂಭು ಪೂಜಾರಿ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯನ್ನು ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಕೆ. ನಡೆಸಿದರು.