ಮಂಗಳೂರು: ಮುಮ್ತಾಝ್ ಅಲಿ ಮೃತದೇಹ ಪತ್ತೆ

Oplus_131072

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಮೇಲೆ ಕಾರು ಇಟ್ಟು ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.‌ಮಮ್ತಾಝ್ ಅಲಿ ಅವರ ಮೃತದೇಹ ಸೋಮವಾರ ಕೂಳೂರು ಸೇತುವೆಯ ಬಳಿ ಪತ್ತೆಯಾಗಿದೆ.

ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಕೋಸ್ಟ್ ಗಾರ್ಡ್ ಸೇರಿದಂತೆ ಸ್ಥಳೀಯ ನಾಡದೋಣಿ ಮೀನುಗಾರರು ಸೋಮವಾರ ಬೆಳಗ್ಗೆ 6 ಗಂಟೆಯಿಂದ ಹುಡುಕಾಟದಲ್ಲಿ ತೊಡಗಿದ್ದರು.

ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ (BNSS) 173ರ ಅಡಿ ಎಫ್ ಐ ಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!