ತೀವ್ರ ಅಸ್ವಸ್ಥ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು
ಉಡುಪಿ, ಅ.09(ಉಡುಪಿ ಟೈಮ್ಸ್ ವರದಿ): ಮಂಗಳವಾರ ತಡರಾತ್ರಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ತೀವ್ರ ಅನಾರೋಗ್ಯ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಪ್ರಮೋದ್ ಮಧ್ವರಾಜ್ ಅವರಿಗೆ ಉಸಿರಾಟದ ಸಮಸ್ಯೆ ಉಂಟಾಗಿತ್ತು. ತಕ್ಷಣ ಅವರನ್ನು ನಿನ್ನೆ ರಾತ್ರಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.