ಬ್ರಹ್ಮಾವರ: ಮದರಸ ಹಾಸ್ಟೆಲ್‌ನಲ್ಲಿ 8ನೇ‌ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆ

ಉಡುಪಿ: ಎಂಟನೇ ತರಗತಿಯ ವಿದ್ಯಾರ್ಥಿಯೊರ್ವ ಬಾತ್’ರೂಮ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದ ಮದರಸದ ಹಾಸ್ಟೆಲ್‌ನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿ ಮೊಹಮ್ಮದ್ ಜಹೀದ್ (12) ಎಂದು ಗುರುತಿಸಲಾಗಿದೆ.

ಕಳೆದ 4 ತಿಂಗಳಿನಿಂದ ಬ್ರಹಾವರ ತಾಲೂಕಿನ ರಂಗನಕೆರೆಯ ಮಾಲೀಕ್ ದಿನಾರ್ ಮದರಸ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಹೇರಾಡಿ ಖಾಸಗಿ ಶಾಲೆಯಲ್ಲಿ 8 ನೇ ತರಗತಿ ವಿದ್ಯಾಭ್ಯಾಸ ಮಾಡಿಕೊಂಡಿರುತ್ತಾನೆ.

ಹಾಸ್ಟೆಲ್‌ನ ಬಾತ್‌ರೂಮ್‌ನಲ್ಲಿ ಸರಳಿಗೆ ಬೈರಸ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದು ಆತನನ್ನು ನೇಣಿನ ಕುಣಿಕೆಯಿಂದ ಬಿಡಿಸಿ ಚಿಕಿತ್ಸೆಗಾಗಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ರಾತ್ರಿ 10:40 ಗಂಟೆಗೆ ಪರೀಕ್ಷಿಸಿ ಮೃತಪಟ್ಟಿರುವ ವಿಚಾರ ತಿಳಿಸಿರುತ್ತಾರೆ. ಮೃತನ ಮರಣದಲ್ಲಿ ಸಂಶಯವಿರುವುದಾಗಿ ಬಾಲಕನ ತಾಯಿ‌ ರಿಹಾನ‌ ಬೇಗಂ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!