ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ವಿ.ಎಚ್.ಪಿ ಆಗ್ರಹ
ಉಡುಪಿ: ದೇಶಾದ್ಯಂತ ಲವ್ ಜಿಹಾದ್ ನಿಷೇಧ ಹಾಗೂ ಲವ್ ಜಿಹಾದ್ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಯ ಮೂಲಕ ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲಾ ವತಿಯಿಂದ ಮನವಿ ಪತ್ರ ನೀಡಿ ಆಗ್ರಹಿಸಲಾಯಿತು.
“ದೇಶದಲ್ಲಿ ಲವ್ ಜಿಹಾದ್ ಮೂಲಕ ಹಿಂದೂ ಹೆಣ್ಣು ಮಕ್ಕಳನ್ನು ರಾಷ್ಟ್ರ ವಿರೋಧಿ ಕೃತ್ಯಗಳಿಗೆ ಬಳಸುವುದಲ್ಲದೆ ಅತ್ಯಾಚಾರ, ಕೊಲೆ ಇಂತಹ ಕೃತ್ಯಗಳಿಗೆ ಆಸ್ಪದ ನೀಡಿ ಸಮಾಜದಲ್ಲಿ ಶಾಂತಿ ಕದಡಲು ಕಾರಣವಾಗುತ್ತಿದೆ.
ಆದ್ದರಿಂದ ರಾಜ್ಯ ಸರ್ಕಾರ ಈ ಲವ್ ಜಿಹಾದ್ ಎಂಬ ಇಸ್ಲಾಮಿಕ್ ಭಯೋತ್ಪಾದನೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರವಾಗಿ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ರಚಿಸುವಂತೆ ಈ ಸಂಧರ್ಭದಲ್ಲಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ್ ಸುನಿಲ್ ಕೆ ಆರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಈ ರೀತಿಯಾಗಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಯವರ ಮೂಲಕ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮನವಿಗಳನ್ನು ನೀಡುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್, ಬಜರಂಗದಳ ಜಿಲ್ಲಾ ಸಂಚಾಲಕ್ ಸುರೇಂದ್ರ ಕೋಟೇಶ್ವರ, ಪ್ರಮುಖರಾದ ಗುರುಪ್ರಸಾದ್ ಬೈಂದೂರು, ನಾಗರಾಜ್ ಕೋಟೇಶ್ವರ ಮತ್ತಿತರರು ಉಪಸ್ಥಿತರಿದ್ದರು.