ಮಲ್ಪೆ: ನಾಪತ್ತೆಯಾಗಿದ್ದ ಜಲೀಲ್‌ ಮೃತದೇಹ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಮಲ್ಪೆ ಬಾಪುತೋಟದ ನಿವಾಸಿ ಜಲೀಲ್‌ (49) ಅವರ ಮೃತದೇಹವು ಪಡುಕೆರೆ ಮಟ್ಟು ಸಮೀಪದ ಪಾಪನಾಶಿನಿ ನದಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿದೆ.

ಜಲೀಲ್‌ ಅವರು ಶನಿವಾರ ಬೆಳಗ್ಗೆ 5 ಗಂಟೆಗೆ ಮನೆಯಿಂದ ನಾಪತ್ತೆಯಾಗಿದ್ದರು. ಅವರ ಬೈಕ್, ಮೊಬೈಲ್ ಹಾಗೂ ಚಪ್ಪಲಿ ಮಲ್ಪೆ ಪಡುಕರೆ ಸೇತುವೆ ಬಳಿ ಪತ್ತೆಯಾಗಿತ್ತು. ಸ್ಥಳೀಯ ಮೀನುಗಾರರು ಮೃತದೇಹದ ಹುಡುಕಾಟಕ್ಕೆ ಈಶ್ವರ್ ಮಲ್ಪೆ ಮತ್ತು ತಂಡದ ಜೊತೆಗೆ ಸಹಕಾರ ನೀಡಿದ್ದರು.

ಈಶ್ವರ್ ಮಲ್ಪೆ ಮತ್ತು ತಂಡ ತಮ್ಮ ಆಂಬುಲೆನ್ಸ್ ಮೂಲಕ ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಿದೆ.

Leave a Reply

Your email address will not be published. Required fields are marked *

error: Content is protected !!