ಉಡುಪಿ: ವಾಯುಭಾರ ಕುಸಿತ- ಭಾರಿ ಗಾಳಿ ಮಳೆ ಸಾಧ್ಯತೆ

Oplus_131072

ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ.

ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರುಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಬೇಕು.
ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು.

ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರ ಬೇಕು. ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಹಾಗೂ ಮರಗಳ ಕೆಳಗೆ ನಿಲ್ಲಬಾರದು. ಈ ಮೇಲ್ಕಂಡ ಅಂಶಗಳನ್ನು ಮಳೆಗಾಲದ ಎಲ್ಲಾ ಸಂದರ್ಭಗಳಲ್ಲಿ ಚಾಚುತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು. ತುರ್ತುಸೇವೆಗೆ ಶುಲ್ಕರಹಿತ:1077 ಹಾಗೂ ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!