ಮುನ್ನೆಚ್ಚರಿಕೆ ಕ್ರಮ ಕೈಗೊಂಡಾಗ ರೋಗದಿಂದ ದೂರ ಉಳಿಯಲು ಸಾಧ್ಯ: ಜಿ. ಜಗದೀಶ್
ಉಡುಪಿ: ಸಾರ್ವಜನಿಕರು ತಮ್ಮ ದೈನಂದಿನ ಜೀವನದಲ್ಲಿ ಆರೋಗ್ಯ ಸುಧಾರಣೆಗೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದಾಗ ಮಾತ್ರ ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮಲೇರಿಯಾ ಅಂತರ್ ಇಲಾಖಾ ಸಮನ್ವಯ ಸಮಿತಿ, ಜಿಲ್ಲಾ ಮಟ್ಟದ ಡೆಂಗ್ಯೂ ಸಮನ್ವಯ ಸಮಿತಿ, ಸಾಮಾಜಿಕ ಸವಲತ್ತುಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯಾವುದೇ ರೋಗ ಬಂದರೂ ಚಿಕಿತ್ಸೆ ಪಡೆಯುವ ಬದಲಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಾಗ ಅನಾರೋಗ್ಯದಿಂದ ದೂರ ಉಳಿಯಲು ಸಾಧ್ಯ. ಸಾರ್ವಜನಿಕರು ತಮ್ಮ ಒತ್ತಡದ ಕೆಲಸಗಳ ಮಧ್ಯೆಯೂ ಆರೋಗ್ಯ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು ಎಂದರು. ಜಿಲ್ಲೆಯಲ್ಲಿ ಪ್ರಸ್ತುತ ಸಾಲಿನಲ್ಲಿ ಈವರೆಗೆ ಮಲೇರಿಯಾ 118, ಡೆಂಗ್ಯೂ 139, ಚಿಕನ್‌ಗುನ್ಯಾ 10 ಪ್ರಕರಣಗಳು ಕಂಡುಬAದಿದೆ ಎಂದ ಅವರು ಈ ರೋಗಗಳು ಸಾಮಾನ್ಯವಾಗಿ ಹೊರ ರಾಜ್ಯಗಳಿಂದ ಉದ್ಯೋಗ ಅರಸಿ ಬಂದಿರುವ
ಕಾರ್ಮಿಕರಿಂದ ಹರಡುವ ಸಾಧ್ಯತೆಗಳಿದ್ದು, ಇವುಗಳ ತಡೆಗೆ ಆರೋಗ್ಯ ಇಲಾಖೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಲೇರಿಯಾ, ಚಿಕನ್ ಗುನ್ಯಾ ಹಾಗೂ ಡೆಂಗ್ಯು ರೋಗಾಣುಗಳು ಸೊಳ್ಳೆಯಿಂದಾಗಿ ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆಗಳಿದ್ದು, ಇಂತಹ ರೋಗವಾಹಕ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ರೀತಿಯ ಮುಂಜಾಗೃತಾ ಕ್ರಮಗಳನ್ನು ನಗರ ಸಭೆ, ಸ್ಥಳೀಯ ಸಂಸ್ಥೆಗಳ ಸಹಾಯದೊಂದಿಗೆ ಕೈಗೊಳ್ಳಬೇಕೆಂದು ತಿಳಿಸಿದರು.
ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಅರಿವು ಮುಡಿಸುವ ಕರ‍್ಯಕ್ರಮಗಳನ್ನು ಇತರ ಇಲಾಖೆಗಳ ಸಹಯೋಗದೊಂದಿಗೆ ಆಗಿಂದಾಗ್ಗೆ ಹಮ್ಮಿಕೊಳ್ಳಬೇಕು ಎಂದರು.
ಬಸ್ ನಿಲ್ದಾಣಗಳಲ್ಲಿ ನಿರ್ಗತಿಕರು ಹಾಗೂ ವಾಸಿಸಲು ಮನೆಯಿಲ್ಲದವರು ರಾತ್ರಿ ವೇಳೆಯಲ್ಲಿ ಅಲ್ಲಿ ತಂಗುತ್ತಿದ್ದು, ಇವರಿಂದ ರೋಗಗಳು ಹರಡುವ ಬಗ್ಗೆ ಕೇಳಿ ಬರುತ್ತಿದ್ದು, ಇವರುಗಳು ನಗರಸಭೆಯ ಶೆಲ್ಟರ್‌ಗಳಲ್ಲಿ ತಂಗುವ0ತೆ ವ್ಯವಸ್ಥೆ ಮಾಡಬೇಕು ಎಂದರು.
ಹೆಚ್.ಐ ವಿ ಸೋಂಕಿತ ಕುಟುಂಬದವರಿಗೆ ಸರ್ಕಾರದ ವಿಶೇಷ ವರ್ಗ ಯೋಜನೆ ಸೇರಿದಂತೆ ಮತ್ತಿತರ ಕಾರ್ಯಗಳಿಂದಲೂ ಸೌಲಭ್ಯಗಳನ್ನು ತಲುಪಿಸುವ ಕೆಲಸ ಪ್ರತಿಷ್ಟಿತ ನೂರರಷ್ಟು ಆಗಬೇಕು ಎಂದರು.
ಆಯೂಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ ಪ್ರಸ್ತುತ ಸಾಲಿಗೆ ಸರ್ಕಾರಿ ಆಸ್ವತ್ರೆಯಲ್ಲಿ 11,300 ಹಾಗೂ ಖಾಸಗಿ ಆಸ್ವತ್ರೆಯಲ್ಲಿ 13,647 ಫಲಾನುಭವಿಗಳು ಸೇರಿದಂತೆ ಒಟ್ಟು 24,947 ಜನ ಚಿಕಿತ್ಸೆ ಪಡೆದುಕೊಂಡಿರುತ್ತಾರೆ ಎಂದರು.