ಮಂಗಳೂರು: ತಲೆಗೆ ಕಲ್ಲು ಎತ್ತಿ ಹಾಕಿ ಖಾಸಗಿ ಬಸ್ ಕಂಡಕ್ಟರ್‌ನ ಹತ್ಯೆ
ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಬಳಿಯ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬರಿಗೆ ಕಲ್ಲು ಎತ್ತಿ ಹಾಕಿ ಹತ್ಯೆಗೈದ ಘಟನೆ ನಡೆದಿದೆ.
ಮಂಗಳೂರು – ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್ (30) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್ ರಾಜೇಶನ ಜರ್ಜರಿತವಾದ ಮೃತದೇಹ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ಮೂಡಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.