ನಕಲಿ ಗುರುತಿನ ಚೀಟಿ ಪ್ರಕರಣ: ಶಾಸಕ ಮುನಿರತ್ನಗೆ ಹೈಕೋರ್ಟ್ ಶಾಕ್!

ಬೆಂಗಳೂರು: ರಾಜರಾಜೇಶ್ವರಿ ನಗರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಮುನಿರತ್ನಗೆ ಹೈಕೋರ್ಟ್ ಶಾಕ್ ನೀಡಿದೆ. 2018ರ ಚುನಾವಣೆಯ ವೇಳೆ ಪತ್ತೆಯಾದ ನಕಲಿ ಗುರುತಿನ ಚೀಟಿಗಳಿಗೆ ಸಂಬಂಧಿಸಿ ಪೋಲೀಸ್ ತನಿಖೆಯ ಪರಿಶೀಲನಾ ವರದಿ ಸಲ್ಲಿಸಲು ನ್ಯಾಯಾಲಯ ಸೂಚಿಸಿದೆ.

ನಕಲಿ ಗುರುತಿನ ಚೀಟಿ ಪ್ರಕರಣವನ್ನು ಪೋಲೀಸರು ಸರಿಯಾದ ಕ್ರಮದಲ್ಲಿ ತನಿಖೆ ಮಾಡಿಲ್ಲ, ಅದಕ್ಕಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಎನ್. ಆನಂದ್ ಕುಮಾರ್ ಹಾಗೂ ಜಿ. ಸಂತೋಷ್ ಕುಮಾರ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪಿಠ ವಿಚಾರಣೆ ನಡೆಸಿ ತನಿಖೆ ಸೂಕ್ತ ರೀತಿಯಲ್ಲಿ ನಡೆದಿದೆಯೆ ಎಲ್ಲವೆ ನ್ನುವುದನ್ನು ಪರಿಶೀಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ನೇಮಕ ಮಾಡಬೇಕು. ಅವರು ಪರಿಶೀಲನೆ ನಡೆಸಿ ಡಿಸೆಂಬರ್ 15ರೊಳಗೆ ಮುಚ್ಚಿದ ಲಕೋಟೆಯಲ್ಲಿಕೋರ್ಟ್ ಗೆ ವರದಿ ನೀಡಬೇಕು ಎಂದು ಆದೇಶಿಸಿದೆ.

ಮುನಿರತ್ನ ಅವರು ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ನಿಂದ ಸ್ಪರ್ಧಿಸಿ ಐವತ್ತು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ರಾಜ್ಯದಲ್ಲಿ ನಡೆದ ಎರಡು ಕ್ಷೇತ್ರಗಳಾದ ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪಚುನಾವಣೆ ಫಲಿತಾಂಶ ನಿನ್ನೆ ಘೋಷಣೆಯಾಗಿತ್ತು.

ಪ್ರಕರಣದ ಮುಂದಿನ ವಿಚಾರಣೆ ಡಿ. 18ಕ್ಕೆ ನಿಗದಿ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!