“ಉಡುಪಿ ಸವಿತಾ ಸಮಾಜ ಸೌಹಾರ್ದ ಸಹಕಾರಿ ಸಂಘ”ಕ್ಕೆ ರಾಜ್ಯ ಮಟ್ಟದ ಪ್ರಶಸ್ತಿ

ಉಡುಪಿ(ಉಡುಪಿ ಟೈಮ್ಸ್ ವರದಿ): ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಬೆಂಗಳೂರು ಮತ್ತು ಹಲವು ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ನಡೆಯಲಿರುವ 67ನೇ ಅಖಿಲ ಭಾರತ ಸಹಕಾರ ಸಪ್ತಾಹ – 2020 ಇದರ ಮೈಸೂರು ವಿಭಾಗದಿಂದ 450 ಕ್ಕೂ ಅಧಿಕ ಸೌಹಾರ್ದ ಸಹಕಾರಿಯಲ್ಲಿ ಉಡುಪಿಯ ಸವಿತಾ ಸಮಾಜ ವಿವಿದ್ದೋದ್ದೆಶ ಸೌಹಾರ್ದ ಸಹಕಾರಿ ಸಂಘ “ರಾಜ್ಯ ಮಟ್ಟದ ಅತ್ತ್ಯುತ್ತಮ ಸೌಹಾರ್ದ ಸಹಕಾರಿ” ಪ್ರಶಸ್ತಿಗೆ ಭಾಜನವಾಗಿದೆ.

ನ.17 ರಂದು ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದಲ್ಲಿ ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್ ಹಾಗೂ ಅರೋಗ್ಯ ಮತ್ತು ಕುಟುಂಬ ಸಚಿವ ಡಾ. ಕೆ ಸುಧಾಕರ್ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!