ಇಂದ್ರಾಳಿ ಸೇತುವೆ ಸಂಪೂರ್ಣಕ್ಕೆ ಮತ್ತೊಂದು ಭರವಸೆ ನೀಡಿದ ಸಂಸದ ಕೋಟ

Oplus_131072

ಉಡುಪಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದ ರೈಲ್ವೆ ಬ್ರಿಡ್ಜ್ ಕಾಮಗಾರಿಯನ್ನು ಇಂದು ಸಂಸದ ಕೋಟ ವೀಕ್ಷಣೆ ನಡೆಸಿದರು.

ಈ ಭಾಗದಲ್ಲಿ ದಿನನಿತ್ಯ‌ ಎಂಬಂತೆ ಅಪಘಾತ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಕಾಮಗಾರಿ ಅವ್ಯವಸ್ಥೆ ಬಗ್ಗೆ ವಿವಿಧ ಸಂಘಟನೆಗಳು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದವು.

ಎಚ್ಚರಿಕೆ ಹಿನ್ನೆಲೆಯಲ್ಲಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವೀಕ್ಷಣೆ ಮಾಡಿದ ಸಂಸದರು ಶೀಘ್ರ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದರು. ಈ ಸೇತುವೆ ಬಗ್ಗೆ ತುಂಬಾ ವಿವಾದಗಳು ನಡೆಯುತ್ತಿವೆ, ಅಪಘಾತಗಳು ಆಗಿವೆ. 2018 ರಲ್ಲಿ ಈ ಕಾಮಗಾರಿ ಆರಂಭವಾಗಿದೆ. ರೈಲ್ವೆ ಇಲಾಖೆ ವಿಳಂಬದಿಂದ ತಡವಾಗುತ್ತಿದೆ.138 ಟನ್ ತೂಕದ ಗರ್ಡರ್ ಅಳವಡಿಸುವ ಯೋಜನೆ ಇದಾಗಿತ್ತು. ರಸ್ತೆ ಉದ್ದ 38 ಮೀಟರ್ ನಿಂದ 58 ಮೀಟರ್ ಗೆ ವಿಸ್ತರಣೆಯಾಗಿದೆ. ಗರ್ಡರ್ ಗಳಿಗೆ ಅಳವಡಿಸುವ ಸ್ಟೀಲ್ 420 ಟನ್ ಗೆ ಏರಿಕೆಯಾಗಿದೆ.ಕಾಮಗಾರಿ ವಿಳಂಬವಾಗಿರುವುದನ್ನು‌ ಒಪ್ಪಿಕೊಂಡರು.

ಜನವರಿ 15 ರೊಳಗೆ ವಾಹನ ಸಂಚಾರಕ್ಕೆ ಅನುಕೂಲ ಮಾಡಲಾಗುವುದು. ಜಿಲ್ಲಾಧಿಕಾರಿಗಳು ಮತ್ತು ಎಸ್ಪಿ ನಡೆಸಿರುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನವಾಗಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!