ಕುಂದಾಪುರ: ಸ್ನಾನಕ್ಕೆ ತೆರಳಿದ ಇಬ್ಬರು ಸಮುದ್ರಪಾಲು
ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಯುವಕರು ಸಮುದ್ರಪಾಲಾಗಿರುವ ಘಟನೆ ಇಂದು ಬೆಳಿಗ್ಗೆ ಬೀಜಾಡಿ ಬೀಚ್‌ನಲ್ಲಿ ನಡೆದಿದೆ.
ಮದುವೆ ಕಾರ್ಯಕ್ರಮಕ್ಕೆಂದು ಬೆಂಗಳೂರಿನಿಂದ ಕುಂದಾಪುರಕ್ಕೆ ಬಂದಿದ್ದ ಇಬ್ಬರು, ಬೀಜಾಡಿ ಬೀಚ್ ಸಮೀಪದ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದರು. ಬೆಳಿಗ್ಗೆ ಇಬ್ಬರೂ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು.
ಮಾಹಿತಿ ತಿಳಿದ ಸ್ಥಳೀಯರು ತಕ್ಷಣ ಓರ್ವನನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದ್ದರು.ಆದರೇ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರು ದಾರಿ ಮಧ್ಯೆ ಮೃತಪಟ್ಟರು. ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ. ಸ್ಥಳಕ್ಕೆ ಕುಂದಾಪುರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.