ಉಡುಪಿ: ಪಟಾಕಿ ಸಿಡಿಸಿಲು ಸಮಯ ನಿಗದಿ, ತಪ್ಪಿದಲ್ಲಿ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಡಳಿತ
ಉಡುಪಿ ನ. 12(ಉಡುಪಿ ಟೈಮ್ಸ್ ವರದಿ):- ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಹಸಿರು ಪಟಾಕಿ ಗಳನ್ನು ಮಾತ್ರ ಮಾರಾಟಬೇಕು ಹಾಗೂ ಸಾರ್ವಜನಿಕರು ಪಟಾಕಿ ಸಿಡಿಸುವ ಸಮಯವನ್ನು ಸರ್ಕಾರದ ಅದೇಶದಂತೆ ರಾತ್ರಿ 8 ರಿಂದ10 ರ ವರಗೆ ಮಾತ್ರ ಸಿಡಿಸಬೇಕು, ನಿಗಧಿತ ಅವಧಿಗಿಂತ ಮುಂಚೆ ಹಾಗೂ ನಿಗಧಿತ ಅವಧಿಯ ನಂತರ ಪಟಾಕಿ ಸಿಡಿಸುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸುರಕ್ಷಿತ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಸಿಡಿಸಬೇಕು, ಈ ಕುರಿತ ಪರಿಶೀಲಿಸಲು ಬೀಟ್ ನಲ್ಲಿರುವ ಪೊಲೀಸ್ ಸಿಬ್ಬಂದಿಯನ್ನು ಬಳಸಿಕೊಳ್ಳುವಂತೆ ಪೊಲೀಸ್ ಇಲಾಖೆಗೆ ಮತ್ತು ಎಲ್ಲಾ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಪಟಾಕಿ ಮಳಿಗೆಗಳಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು, ನಿಷೇಧಿತ ಪಟಾಕಿಯನ್ನು ಮಾರಾಟ ಮಾಡಿದ್ದಲ್ಲಿ ಅಂತಹ ಅಂಗಡಿಗಳ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದ ಜಿಲ್ಲಾಧಿಕಾರಿ ಜಿ.ಜಗದೀಶ್, ಮಾಲಿನ್ಯ
ನಿಯಂತ್ರಣ ಮಂಡಳಿಯಿoದ , ಹಬ್ಬದ ಮುಂಚೆ ಮತ್ತು ನಂತರದ ಮಾಲಿನ್ಯ ಪ್ರಮಾಣವನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.
ಪಟಾಕಿ ಮಳಿಗೆಗಳ ಬಳಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಇದಕ್ಕಾಗಿ ನಿಗಧಿತ ಅಂತರದ ಗುರುತು ಹಾಕಿರುವ ಬಗ್ಗೆ ಮತ್ತು ಸಾಔðಜನಿಕರು ಮಸ್ಕ್ ದರಿಸಿರುವುದರ ಕುರಿತು ಅಧಿಕಾರಿಗಳು ಪರಿಶೀಲಸಿ,ನಿಯಮ ಉಲ್ಲಂಘನೆಯಾಗಿದ್ದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಜಿ.ಜಗದೀಶ್ ಸೂಚನೆ ನೀಡಿದರು. ಸಾರ್ವಜನಿಕರು ಪಟಾಕಿ ಕೊಳ್ಳುವಾಗ ಹಸಿರು ಪಟಾಕಿ ಎಂಬುದರ ಬಗ್ಗೆ ಪರಿಶೀಲಿಸಿ ಖರೀದಿಸಬೇಕು, ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ಪ್ರಕರಣಗಳು ಕಡಿಮೆಯಾಗಿದ್ದು, ಸಾರ್ವಜನಿಕರು ಹಬ್ಬದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಮತ್ತು ಮಾಸ್ಕ್ ಧರಿಸುವುದನ್ನು ಮರೆಯಬಾರದು, ಸರ್ಕಾರದ ಮಾರ್ಗಸೂಚಿಯಂತೆ ಸುರಕ್ಷಿತ ಕ್ರಮಗಳನ್ನು ಅನುಸರಿಸಿ
ಹಬ್ಬವನ್ನು ಆಚರಿಸುವಂತೆ ಹಾಗೂ ಕೋವಿಡ್ ಆಸ್ಪತ್ರೆಯ 100 ಮೀ ವ್ಯಾಪ್ತಿಯಲ್ಲಿ ಯಾವುದೇ ಪಟಾಕಿಗಳನ್ನು ಸಿಡಿಸದಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಹಬ್ಬದ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಕಸ ಸಂಗ್ರಹವಾಗದoತೆ ಸಮರ್ಪಕವಾಗಿ ಕಸ ವಿಲೇವಾರಿಯನ್ನು ಮಾಡಿ, ಸ್ಚಚ್ಚತೆಯನ್ನು ಕಾಪಾಡುವಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ
ಸೂಚಿಸಿದರು.
ಕೋವಿಡ್ 19 ರೋಗದ ಹಿನ್ನೆಲೆಯಲ್ಲಿ ಸುಡುಮದ್ದು ಮಾರಾಟ ಮಾಡುವ ಮಳಿಗೆಯ ಸುತ್ತಮುತ್ತ ಪ್ರತಿನಿತ್ಯ ಸ್ಯಾನಿಟೈಸೇಷನ್ ಮಾಡಬೇಕು ಹಾಗೂ ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಮತ್ತು ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸಬೇಕು.
ಪಟಾಕಿ ಖರೀದಿಸುವಾಗ ಮಾರಾಟಗಾರರು ಮತ್ತು ಸಾರ್ವಜನಿಕರು ಮುಖಗವಸು ಧರಿಸಬೇಕು ಮತ್ತು 6 ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು. ಜಿಂಕ್ ಶೀಟ್ ಅಥವಾ ಅಗ್ನಿ ನಿರೋಧಕ ವಸ್ತುಗಳಿಂದ ಮಳಿಗೆ ನಿರ್ಮಿಸಬೇಕು.
ಒಂದು ಮಳಿಗೆಯಿಂದ ಇನ್ನೊಂದು ಮಳಿಗೆಗೆ ಕನಿಷ್ಟ 6 ಮೀಟರ್ ಅಂತರವನ್ನು ಹೊಂದಿರಬೇಕು. ಮಳಿಗೆಯ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿಯೂ ಪ್ರವೇಶ ದ್ವಾರವಿರಬೇಕು ಹಾಗೂ ಮಳಿಗೆಯ ಮುಂಭಾಗದಲ್ಲಿ ಅಗ್ನಿ ಶಾಮಕ ವಾಹನಗಳು ಓಡಾಡುವಂತೆ ಮತ್ತು ಸಾರ್ವಜನಿಕರು ಸರಾಗವಾಗಿ ಹೋಗುವಂತಿರಬೇಕು. ಪಟಾಕಿಗಳನ್ನು ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯ ವರೆಗೆ ಮಾತ್ರ ಮಾರಾಟ ಮಾಡಬೇಕು. ಮಳಿಗೆಗಳಲ್ಲಿ ವಿದ್ಯುತ್ ವಯರಿಂಗ್ ಪೈಪ್ ಮೂಲಕ ಅಳವಡಿಸಬೇಕು. ಅಲಂಕಾರಿಕ ವಿದ್ಯುತ್ ಸೀರಿಯಲ್ ಸೆಟ್‌ಗಳನ್ನು ಹಾಕಬಾರದು.
ಮಳಿಗೆಗಳಲ್ಲಿ ಅಡುಗೆ ಮಾಡುವುದಾಗಲೀ, ಗ್ಯಾಸ್, ಕ್ಯಾಂಡಲ್ ಮತ್ತು ಅಗರ್‌ಬತ್ತಿಗಳನ್ನು ಉರಿಸುವುದಾಗಲೀ ಮಾಡಬಾರದು. ಪರವಾನಿಗೆ ಅವಧಿ ಮುಗಿದ ನಂತರ ಉಳಿದಿರುವ ಸುಡುಮದ್ದುಗಳನ್ನು ಮನೆಗೆ ಕೊಂಡೊಯ್ಯದೇ ಅವುಗಳನ್ನು ಅಧಿಕೃತ ಸಗಟು ಮಾರಾಟಗಾರರಿಗೆ ಹಿಂದಿರುಗಿಸಬೇಕು. ಪರವಾನಿಗೆ ಅವಧಿ ನಂತರ ಮಳಿಗೆಯಲ್ಲಿ ಉಳಿದ ತ್ಯಾಜ್ಯವನ್ನು ಸುಡುಮದ್ದುಗಳಿಂದ ಬೇರ್ಪಡಿಸಿ ಕಾಗದ, ಪ್ಲಾಸ್ಟಿಕ್‌ಗಳನ್ನು ಹತ್ತಿರದ ತ್ಯಾಜ್ಯ ವಿಲೇವಾರಿ ಸಂಗ್ರಹಣಾ ಸ್ಥಳಕ್ಕೆ ಸಾಗಿಸಬೇಕು.
ಈ ಮೆಲ್ಕಂಡ ನಿಯಮ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯಿದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ /ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಎಸ್ಪಿ ವಿಷ್ಣುವರ್ಧನ್, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು , ಎಲ್ಲಾ ತಾಲೂಕುಗಳ ತಹಸೀಲ್ದಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Strict action should be taken against the people who are going against the rules of the government/district administration regarding the Deepaavali firecracker.During this difficult time of sevier spreading of Covid 19, it is the duty of all people to follow the instructions of the government without hesitation.