ಭೀಕರ ಬಸ್ ಅಪಘಾತ – 20 ಮಂದಿ ಮೃತ್ಯು, ಹಲವರು ಗಂಭೀರ
ಉತ್ತರಾಖಾಂಡ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಮೃತಪಟ್ಟು ಹಲವು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಅಲ್ಮೋರಾದಲ್ಲಿ ಇಂದು ನಡೆದಿದೆ.
ಇಂದು ಬೆಳಿಗ್ಗೆ ಸುಮಾರು 9 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದ್ದು ಈ ವೇಳೆ ಬಸ್ಸಿನಲ್ಲಿ 35 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಪೊಲೀಸರು ಮತ್ತು ಸ್ಥಳೀಯರ ತಂಡಗಳು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಬಸ್ಸಿನಲ್ಲಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ತಿಳಿಸಿದ್ದಾರೆ. ಅಲ್ಲದೆ ಗಂಭೀರ ಗಾಯಗೊಂಡವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದಿದ್ದಾರೆ.
ಘಟನಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂ ತೆ ಜಿಲ್ಲಾಡಳಿತ ಮಂಡಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ಸುದ್ದಿ ಕೇಳಿ ಬಹಳ ನೋವಾಯಿತು. ಗಾಯಾಗಳು ರಕ್ಷಣೆಗೆ ಕಾರ್ಯಾಚರಣೆ ಚುರುಕುಗೊಳಿಸುವಂತೆ ಅಧಿಕಾರಿ ಗಳಿಗೆ ಸೂಚನೆ ನೀಡಲಾಗಿದೆ. ಎಸ್‌ಡಿಆರ್‌ಎಫ್ ತಂಡ ಗಾಯಾಳುಗಳ ರಕ್ಷಣೆ ಮಾಡುತ್ತಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಏರ್ ಲಿಫ್ಟ್ ಮಾಡವಂತೆಯೂ ಸೂಚಿಸಲಾಗಿದೆ. ಮೃತರ ಕುಟುಂಬಕ್ಕೆ 4 ಲಕ್ಷ ಹಾಗೂ ಗಾಯಾಳುಗಳಿಗೆ ರೂ.1 ಲಕ್ಷ ಪರಿಹಾರ ನೀಡುವಂತೆ ಆರ್’ಟಿಒ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ನ್ಯಾಯಾಂಗ ತನಿಖೆಗೂ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ