ಮಣಿಪಾಲ: ಬೇಕರಿ, ಅಂಗಡಿಯಲ್ಲಿ ಕಳ್ಳತನ- ಮೂವರ ಬಂಧನ
ಉಡುಪಿ: ಶಿವಳ್ಳಿ ಗ್ರಾಮದ ಬೇಕ್ ಲೇನ್ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್ ಸ್ಟೋರ್ಸ್ ನ ಶೆಟರ್ ಒಡೆದು ನಗದು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಪ್ಪಳ ಜಿಲ್ಲೆಯ ಗಜೇಂದ್ರಗಡದ ನಿವಾಸಿ ಮಂಜುನಾಥ ಚಿದಾನಂದಪ್ಪ ನರತೆಲಿ(24) ಹಟ್ಟಿಯಂಗಡಿಯ ನಿವಾಸಿಗಳಾದ ಪ್ರಸಾದ್ (22) ಕಿಶನ್(20) ಬಂಧಿತ ಆರೋಪಿಗಳು. ಈ ಮೂವರು ಆರೋಪಿಗಳು ಅ.31ರಂದು ರಾತ್ರಿ ಬೇಕ್ ಲೇನ್ ಬೇಕರಿ ಹಾಗೂ ಈಶ್ವರನಗರದ ಆದಿಶಕ್ತಿ ಜನರಲ್ ಸ್ಟೋರ್ಸ್ ನ ಶೆಟರ್ ಒಡೆದು 60 ಸಾವಿರ ರೂ. ನಗದು ಕಳ್ಳತನ ಮಾಡಿ ಪರಾರಿಯಾಗಿದ್ದರು.ಕಾರ್ಯಾಚರಣೆಗೆ ಇಳಿದ ಪೊಲೀಸರು ಮಣಿಪಾಲದ ಶಿಂಬ್ರಾ ಬ್ರಿಡ್ಜ್ ಬಳಿ ಬುಧವಾರ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಸುಮಾರು 5,00,000 ರೂ ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.