ಶಾಸಕ ಯಶ್ಪಾಲ್ ಸುವರ್ಣ ಸ್ಥಾನದ ಘನತೆಗೆ ತಕ್ಕಂತೆ ವರ್ತಿಸಲಿ ಮತ್ತು ಅಭಿವೃದ್ಧಿಯ ಕಡೆ ಗಮನಹರಿಸಲಿ-ಶರ್ಫುದ್ದಿನ್ ಶೇಖ್

Oplus_131072

ಉಡುಪಿ: ಶಾಸಕ ಯಶ್ ಪಾಲ್ ಸುವರ್ಣ ಶಾಸಕ ಸ್ಥಾನದ ಘನತೆಯನ್ನು ಮರೆತು ವರ್ತಿಸುತ್ತಿದ್ದಾರೆ. ಈ ವ್ಯಕ್ತಿ ಶಾಸಕರೋ ಅಥವಾ ಪುಡಿ ರೌಡಿಯೋ ಎಂಬ ಅನುಮಾನ ಮೂಡುತ್ತಿದೆ. ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನ ಅವ್ಯವಹಾರದ ಆರೋಪ ವ್ಯಾಪಕವಾಗಿ ಇವರ ಮೇಲಿದೆ. ಈ ಪ್ರಕರಣದಿಂದ ಸಾರ್ವಜನಿಕರ ಗಮನವನ್ನು ಬೇರೆ ಕಡೆ ಸೆಳೆಯಲು ವಕ್ಫ್ ನೆಪವಾಗಿಸಿಕೊಂಡು ಮುಸ್ಲಿಂ ಸಮುದಾಯದ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಾ ಶಾಸಕ ಸ್ಥಾನದ ಘನತೆಯನ್ನು ಮರೆತು ಮಾತನಾಡುತ್ತಿದ್ದಾರೆ.

ಇವರೊಂದಿಗೆ ಬಹಳಷ್ಟು ಬಿಜೆಪಿ ನಾಯಕರು ಜಿಲ್ಲಾಧಿಕಾರಿ ಕಚೇರಿಗೆ ವಕ್ಫ್ ವಿಚಾರದಲ್ಲಿ ಪ್ರತಿಭಟನೆಯ ನೆಪದಲ್ಲಿ ನುಗ್ಗಿದ್ದಾರೆ. ವಕ್ಫ್ ಸಂಬಂಧವಾಗಿ ಅತಿಹೆಚ್ಚು ನೋಟಿಸ್ ಗಳನ್ನು ರೈತರಿಗೆ ನೀಡಿದ್ದು ಇವರ ಹಿಂದಿನ ಸರ್ಕಾರ. 2014ರಲ್ಲಿ ಬಿಜೆಪಿಯವರ ಕೇಂದ್ರ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ ವಕ್ಫ್ ಭೂಮಿಯನ್ನು ತೆರವುಗೊಳಿಸುತ್ತೇವೆ ಎನ್ನುವ ವಾಗ್ದಾನವಿದೆ. 2012 ರಲ್ಲಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಅನ್ವರ್ ಮಾಣಿಪ್ಪಾಡಿ ವರದಿ ತರಿಸಿಕೊಂಡು ರಾಜ್ಯಾದ್ಯಂತ ರೈತರಿಗೆ ನೋಟಿಸ್ ಕೊಟ್ಟಿದೆ. ಇಷ್ಟೆಲ್ಲಾ ಇತಿಹಾಸ ಇದ್ದರೂ ಈಗ ರಾಜ್ಯ ಸರ್ಕಾರ ನೋಟಿಸ್ ಕೊಟ್ಟಿದೆ ಎಂದು ಕಂಡಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ.

ಸಿದ್ದರಾಮಯ್ಯ ನೇತೃತ್ವ ಸರ್ಕಾರ ಹಲವು ಗ್ಯಾರೆಂಟಿಗಳನ್ನು ಘೋಷಿಸಿ ಜನಪ್ರಿಯತೆಯ ಉತ್ತುಂಗದಲ್ಲಿದೆ. ಹೀಗೆ ಗ್ಯಾರಂಟಿಗಳು ಬಡವರಿಗೆ ತಲುಪಿ ಅವರ ಬದುಕು ಹಸನಾದರೆ ಮತ್ತೆ ನಮಗೆ ರಾಜಕೀಯ ಭವಿಷ್ಯವಿಲ್ಲ ಎಂದು ತಿಳಿದು ಈಗ ಸರ್ಕಾರದ ವಿರುದ್ಧ ವಕ್ಫ್ ನೋಟಿಸುಗಳನ್ನೇ ನೆಪವಾಗಿಸಿಕೊಂಡು ಡಿಸಿ ಕಚೇರಿಗೆ ನುಗ್ಗುವುದು, ರಸ್ತೆಯ ಮೇಲೆ ಪ್ರತಿಭಟನೆ ಮಾಡುವ ನಾಟಕಗಳನ್ನು ಮಾಡುತ್ತಿದ್ದಾರೆ. ರಾಜ್ಯದ ಜನತೆಗೆ ಈ ನಾಟಕದ ಹಿಂದಿನ ಉದ್ದೇಶ ಮತ್ತು ಹುನ್ನಾರ ಅರ್ಥವಾಗಿದೆ.

ಮೂರು ಉಪಚುನಾವಣೆಗಳು ಮತ್ತು ಮಹಾರಾಷ್ಟ್ರ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಎಂದಿನ ಅಲ್ಪಸಂಖ್ಯಾತರ ವಿರೋಧದ ರಾಜಕಾರಣ ಇದೆಂಬುದು ಸಾಮಾನ್ಯ ಜ್ಞಾನ ಇದೆ ಎಲ್ಲರಿಗೂ ತಿಳಿಯುತ್ತದೆ. ಬಿಜೆಪಿಯವರು ಇಂತಹ ನಾಟಕಗಳನ್ನು ಬಿಟ್ಟು ಕರ್ನಾಟಕ ಸರ್ಕಾರದ ಮಾದರಿಯಲ್ಲಿ ಭಾರತದ ತಮ್ಮ ಆಡಳಿತ ಇರುವ ರಾಜ್ಯ ಸರ್ಕಾರಗಳಿಗೆ ಸಿದ್ದರಾಮಯ್ಯ ಸರ್ಕಾರದ ರೀತಿಯಲ್ಲಿ ಜನಕಲ್ಯಾಣ ಯೋಜನೆಯನ್ನು ಬುದ್ಧಿ ಬೆಳೆಸಿಕೊಳ್ಳಬೇಕಿದೆ. ಅದನ್ನು ಮಾಡುವ ಸಾಮರ್ಥ್ಯವಿಲ್ಲದೆ ಇಲ್ಲಸಲ್ಲದ ಆರೋಪಗಳನ್ನು ಮಾಡಿಕೊಂಡು ಜನರ ಗಮನವನ್ನು ಬೇರೆ ಕಡೆ ಸೆಳೆಯುವುದು ಸರಿಯಲ್ಲ.

ಶರ್ಫುದ್ದಿನ್ ಶೇಖ್ ಮಜೂರ್ ಅಧ್ಯಕ್ಷರು, ಕಾಂಗ್ರೆಸ್ ಅಲ್ಪಸಂಖ್ಯಾತರು ವಿಭಾಗ ಉಡುಪಿ

Leave a Reply

Your email address will not be published. Required fields are marked *

error: Content is protected !!