ನ.10: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ, ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ, ನ.09: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಆಯೋಜಿಸಲಾದ ವಿವಿಧ ಸಮುದಾಯಗಳ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನ.10 (ನಾಳೆ) ಸಂಜೆ 6ಗಂಟೆಗೆ ಉಡುಪಿಯ ಬಾಸೆಲ್ ಮಿಷನ್ ಮೆಮೋರಿಯಲ್ ಆಡಿಟೋರಿಯಮ್‌ನಲ್ಲಿ ನಡೆಯಲಿದೆ.

ಬರಕಾ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ಕಾಲೇಜಿನ ಪ್ರಾಂಶುಪಾಲ ಬಿ.ಎಸ್.ಶರ್ಫುದ್ದೀನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಯೆನೆಪೋಯ ವಿ.ವಿ ಕುಲಪತಿ ಅಬ್ದುಲ್ಲಾ ಕುಂಞಿ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶಸ್ತಿ ಪ್ರದಾನ ಮಾಡಲಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮುಖ್ಯ ಭಾಷಣ ಮಾಡಲಿದ್ದಾರೆ. ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಯಾಸಿನ್ ಮಲ್ಪೆ ಅಭಿನಂದನಾ ಭಾಷಣ ಮಾಡಲಿದ್ದಾರೆ.

2023-24ನೇ ಸಾಲಿನ ’ಮಾನವ ರತ್ನ’ ಪ್ರಶಸ್ತಿಗೆ ಸಂಸದ ಸಸಿಕಾಂತ್‌ ಸೆಂಥಿಲ್, ’ಸೇವಾ ರತ್ನ’ ಪ್ರಶಸ್ತಿಗೆ ಕಾರ್ಕಳದ ಉದ್ಯಮಿ ಕೆ.ಎಸ್.ನಿಸಾರ್ ಅಹ್ಮದ್ ಮತ್ತು ಚೊಚ್ಚಲ ‘ಸೌಹಾರ್ದ ರತ್ನ’ ಪ್ರಶಸ್ತಿಗೆ ಉಡುಪಿಯ ಧರ್ಮಗುರು ಫಾ. ವಿಲಿಯಮ್ ಮಾರ್ಟಿಸ್ ಆಯ್ಕೆಯಾಗಿದ್ದಾರೆ.

ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಿರಿಯ ಸಾಧಕರಾದ ಸಾಹಿತಿ ಡಾ.ಗಣನಾಥ ಎಕ್ಕಾರ್, ಉಡುಪಿ ಜಿಪಂ ಮಾಜಿ ಅಧ್ಯಕ್ಷೆ ಸರಸು ಡಿ.ಬಂಗೇರ, ಉಡುಪಿ ಜಿಲ್ಲಾ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷೆ ಸರಳಾ ಕಾಂಚನ್, ದಲಿತ ನಾಯಕ ಅಣ್ಣಪ್ಪ ನಕ್ರೆ ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಮತ್ತು ಹಸೈನಾರ್ ಕೋಡಿ ಕುಂದಾಪುರ ಅವರನ್ನು ಸನ್ಮಾನಿಸಲಾಗುವುದು.

Leave a Reply

Your email address will not be published. Required fields are marked *

error: Content is protected !!