ಮಣಿಪಾಲ: ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ರಿಕ್ಷಾ ಪಲ್ಟಿ- ಒಂಭತ್ತು ವಿದ್ಯಾರ್ಥಿಗಳಿಗೆ ಗಾಯ
ಮಣಿಪಾಲ: ನ.11(ಉಡುಪಿ ಟೈಮ್ಸ್ ವರದಿ) ಶಾಲಾ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ರಿಕ್ಷಾವೊಂದು ಮಣಿಪಾಲದಿಂದ ಪರ್ಕಳ ಹೋಗುವ ರಾಷ್ಟ್ರೀಯ ಹೆದ್ದಾರಿಯ ಗುಂಡಿಗೆ ಬಿದ್ದು ಪಲ್ಟಿಯಾಗಿ ಒಂಭತ್ತು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ.
ಮಣಿಪಾಲದಿಂದ ಒಂಭತ್ತು ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುವಾಗ ಆಟೋ ಚಾಲಕ ಪ್ರಶಾಂತ್ ಎಂಬವರ ಆಟೋ ಹೆದ್ದಾರಿಯ ಬೃಹತ್ ಗುಂಡಿಗೆ ಬಿದ್ದಿದೆ ಎನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ಆಟೋ ಮಗುಚಿ ಬಿದ್ದಿದೆ. ತಕ್ಷಣ ಸ್ಥಳೀಯರು ಗಾಯಗೊಂಡ ಎಂಟು ಶಾಲಾ ಮಕ್ಕಳನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯನ್ ಎಂಬಾತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆಂದು ಮಣಿಪಾಲ ಪೊಲೀಸರು ತಿಳಿಸಿದ್ದಾರೆ. ರಿಕ್ಷಾ ಚಾಲಕನಿಗೂ ಸಣ್ಣಪುಟ್ಟ ಗಾಯವಾಗಿದೆಂದು ಸ್ಥಳೀಯರು ತಿಳಿಸಿದ್ದಾರೆ.