ಕಾರ್ಕಳ: ಮನೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ- 15ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ ವಶಕ್ಕೆ

ಕಾರ್ಕಳ: ಬೋಳ ಗ್ರಾಮದ ಎರಡು ಮನೆಗಳಲ್ಲಿ ಗೋವಾ ರಾಜ್ಯದ ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ 15 ಲಕ್ಷ ರೂ.ಮೌಲ್ಯದ ಮದ್ಯದ ಬಾಕ್ಸ್ ಗಳನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ಇಂದು ನಡೆದಿದೆ.

ಅಬಕಾರಿ ಉಪ ಆಯುಕ್ತೆ ಬಿಂದು ಅವರ ನೇತೃತ್ವದಲ್ಲಿ ಬೋಳದ ಅವಿನಾಶ್ ಮಲ್ಲಿ ಎಂಬವರ ಮನೆಗೆ ದಾಳಿ ನಡೆಸಿದ್ದು, ದುಬಾರಿ ಮೌಲ್ಯದ ಮದ್ಯದ ಬಾಟಲಿಗಳು ಬಾಕ್ಸ್‌ಗಳು ಕೂಡ ಪತ್ತೆಯಾಗಿದೆ. 200 ಕ್ಕೂ ಅಧಿಕ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದು, ಇವು ನಕಲಿ ಮದ್ಯವೋ, ಅಸಲಿ ಮದ್ಯವೋ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ.

ಗ್ರಾಮೀಣ ಭಾಗದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮದ್ಯ ದಾಸ್ತಾನು ಮಾಡಿರುವ ಬಗ್ಗೆ ಅಧಿಕಾರಿಗಳು ದಂಗಾಗಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪರಿಶೀಲನೆ ನಡೆಯುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಶೀಘ್ರ ವಿವರವಾದ ಮಾಹಿತಿ ನೀಡಲಾಗುವುದು ಎಂದು ಅಬಕಾರಿ ಡಿಸಿ ಬಿಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!