ಉಡುಪಿ: ನ.17ರಂದು “ಯಕ್ಷಗಾನ ಕಲಾರಂಗ” ಪ್ರಶಸ್ತಿ ಪ್ರದಾನ

ಉಡುಪಿ, ನ.14: ಯಕ್ಷಗಾನ ಕಲಾರಂಗದ 2024ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ನ.17ರ ಅಪರಾಹ್ನ 3 ಗಂಟೆಗೆ ನಗರದ ಶಾರದಾ ಮಂಟಪ ರಸ್ತೆಯಲ್ಲಿರುವ ಯಕ್ಷಗಾನ ಕಲಾರಂಗದ ನೂತನ ಕಟ್ಟಡ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ ರಿಸರ್ಚ್ ಸೆಂಟರ್ (ಐವೈಸಿ)ನಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್ ತಿಳಿಸಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಲಿರುವರು ಎಂದರು. ಇದೇ ಸಂದರ್ಭದಲ್ಲಿ ಆರ್.ಎಲ್ ಭಟ್ – ವಾರಿಜಾಕ್ಷಿ ಆರ್. ಭಟ್ ಗೌರವಾರ್ಥ ವ್ಯವಸ್ಥೆಗೊಳಿಸಲಾದ ನೂತನ ಪ್ರಸಾಧನ ಕೊಠಡಿಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಅಲ್ಲದೇ ಐವೈಸಿಯಲ್ಲಿ ಅಳವಡಿಸಲಾದ ಸಿಸಿಟಿವಿಯ ಉದ್ಘಾಟನೆಯೂ ನಡೆಯಲಿದೆ ಎಂದರು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು ಯಕ್ಷ ವಿದ್ಯಾಪೋಷಕ್‌ನ 75ವಿದ್ಯಾರ್ಥಿಗಳಿಗೆ ಒಟ್ಟಾರೆಯಾಗಿ 6,42,000ರೂ. ಸಹಾಯಧನವನ್ನು ವಿತರಿಸಲಿದ್ದಾರೆ ಎಂದು ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದರು.

ಸಮಾರಂಭದಲ್ಲಿ ಒಟ್ಟಾರೆಯಾಗಿ ಆರು ಜಿಲ್ಲೆಗಳ ಒಟ್ಟು 23 ಮಂದಿ ಹಿರಿಯ ಯಕ್ಷಗಾನ ಕಲಾವಿದರಿಗೆ 2024 ನೇ ಸಾಲಿನ ವಿವಿಧ ಯಕ್ಷಗಾನ ಕಲಾವಿದರ ಸ್ಮರಣಾರ್ಥ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವು ದು. ಪ್ರಶಸ್ತಿಯು ತಲಾ 20,000 ನಗದು ಪುರಸ್ಕಾರವ ನ್ನು ಹೊಂದಿರುತ್ತದೆ. ಈ ಬಾರಿ ಹೊಸದಾಗಿ ರಮೇಶ್ ರಾವ್ ಸ್ಮರಣಾರ್ಥ ಹವ್ಯಾಸಿ ಕಲಾವಿದರಾದ ಕೆ. ಶ್ರೀನಿವಾಸ ಉಪಾಧ್ಯರಿಗೆ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಮುರಲಿ ಕಡೆಕಾರ್ ತಿಳಿಸಿದರು.

ಇದರೊಂದಿಗೆ ಕುಂದಾಪುರ ತಾಲೂಕು ತೆಕ್ಕಟ್ಟೆ ಕೊಮೆಯ ಯಶಸ್ವಿ ಕಲಾವೃಂದಕ್ಕೆ ‘ಶ್ರೀವಿಶ್ವೇಶತೀರ್ಥ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು ಒಂದು ಲಕ್ಷ ರೂ.ನಗದು ಪುರಸ್ಕಾರವನ್ನು ಹೊಂದಿದೆ. ಅಲ್ಲದೇ ಯಕ್ಷಚೇತನ ಪ್ರಶಸ್ತಿ ಯನ್ನು ಸಂಸ್ಥೆಯ ಮಾಜಿ ಅಧ್ಯಕ್ಷ ಕೆ.ಗಣೇಶ ರಾವ್ ಅವರಿಗೆ ಪ್ರದಾನ ಮಾಡಲಾಗುವುದು ಎಂದರು.

ಪ್ರಸಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಬೆಂಗಳೂರಿನ ಹರೀಶ್ ರಾಯಸ್, ಕೆ. ಸದಾಶಿವ ಭಟ್, ಅಮೆರಿಕದ ಹರಿಪ್ರಸಾದ್ ಭಟ್, ಮಟಪಾಡಿಯ ಎಂ.ಸಿ. ಕಲ್ಕೂರ, ಮಂಗಳೂರಿನ ಲೀಲಾಕ್ಷಿ ಬಿ. ಕರ್ಕೇರ, ತೆಕ್ಕಟ್ಟೆ ಯಶಸ್ವಿ ಕಲಾವೃಂದ ಅಧ್ಯಕ್ಷ ಸೀತಾರಾಮ ಶೆಟ್ಟಿ ಪಾಲ್ಗೊಳ್ಳುವರು.

ಈ ಸಂದರ್ಭದಲ್ಲಿ ವಾಸುದೇವ ಸಾಮಗರ 30 ಪ್ರಸಂಗಗಳ ‘ಯಕ್ಷ ರಸಾಯನ’ ಪುಸ್ತಕವನ್ನು ಬಿಡುಗಡೆ ಮಾಡಲಾಗು ವುದು. ಹಾಗೂ ಇತ್ತೀಚೆಗೆ ನಿಧನ ಹೊಂದಿದ ಮೂವರು ಕಲಾವಿದರ ಕುಟುಂಬಿಕರಿಗೆ ‘ಸಾಂತ್ವನ ನಿಧಿ’ಯನ್ನು ನೀಡಲಾಗುವುದು ಎಂದು ಮುರಲಿ ಕಡೆಕಾರ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಮೊದಲು ಅಪರಾಹ್ನ 1:45ರಿಂದ ನವರಸಾಯನ: ಯಕ್ಷಗಾಯನ ಪ್ರಸ್ತುತಿಗೊಳ್ಳಲಿದೆ. ಸಮಾರಂಭದ ಬಳಿಕ ಸಂಜೆ 5ರಿಂದ ಬಡಗುತಿಟ್ಟಿನ ಕಲಾವಿದರಿಂದ ‘ಬಭ್ರುವಾಹನ ಕಾಳಗ’ ಯಕ್ಷಗಾನ ಪ್ರಸ್ತುತ ಗೊಳ್ಳಲಿದೆ ಎಂದು ಅವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಲಾರಂಗದ ಉಪಾಧ್ಯಕ್ಷ ಎಸ್.ವಿ.ಭಟ್, ಜೊತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಕೋಶಾಧಿಕಾರಿ ಕೆ.ಸದಾಶಿವ ಭಟ್ ಹಾಗೂ ಸದಸ್ಯರಾದ ಭುವನಪ್ರಸಾದ್ ಹೆಗ್ಡೆ, ನಿರಂಜನ ಭಟ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!