ಕಾರ್ಕಳ: ಪತಿಯ ಅಗಲಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
ಕಾರ್ಕಳ: ತಿಂಗಳ ಹಿಂದೆ ಪತಿಯ ಸಾವಿನ ಪ್ರಕರಣದಿಂದ ಮಾನಸಿಕವಾಗಿ ನೊಂದಿದ್ದ ಪತ್ನಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಮಿಯ್ಯಾರು ಸಮೀಪ ಇಂದು ಬೆಳಕಿಗೆ ಬಂದಿದೆ.
ಮಿಯ್ಯಾರು ಕುಂಟಿಬೈಲು ಮಂಜಡ್ಕ ನಿವಾಸಿ ಸೌಮ್ಯ (39) ಆತ್ಮಹತ್ಯೆಗೆ ಶರಣಾದವರು. ಕಳೆದ 15 ವರ್ಷಗಳಿಂದ ಅಂಗನವಾಡಿ ಶಿಕ್ಷಕಿಯಾಗಿ ಪರಿಸರದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇಬ್ಬರು ಹೆಣ್ಣುಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದ ಇವರು ಒಂದು ತಿಂಗಳ ಹಿಂದೆ ಪತಿ ನಿಧನದ ಅನಂತರ ಮಾನಸಿಕವಾಗಿ ನೊಂದಿದ್ದು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕಾರ್ಕಳ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.