ಮಂಗಳೂರು: ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮೂವರು ಯುವತಿಯರು ಮೃತ್ಯು

ಉಳ್ಳಾಲ: ಖಾಸಗಿ ರೆಸಾರ್ಟ್‌ವೊಂದರ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಮೃತರನ್ನು ಕೀರ್ತನಾ ಎನ್ (21), ನಿಶಿತಾ ಎಂ.ಡಿ.̤(21) ಹಾಗೂ ಪಾರ್ವತಿ ಎಸ್ (20) ಎಂದು ಗುರುತಿಸಲಾಗಿದೆ. ಈ ಮೂವರು ಮೈಸೂರು ನಿವಾಸಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಸೋಮೇಶ್ವರ ಗ್ರಾಮದ ಬಟ್ಟಪ್ಪಾಡಿ ಅಡ್ಡರಸ್ತೆ ಪೆರಿಬೈಲ್ ಎಂಬಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ.

ಮೈಸೂರಿನ ಈ ಮೂವರು ಯುವತಿಯರು ಶನಿವಾರ ರೆಸಾರ್ಟ್ ಗೆ ಆಗಮಿಸಿದ್ದರು. ಇಂದು ಬೆಳಗ್ಗೆ ರೆಸಾರ್ಟ್ ಮುಂಭಾಗದಲ್ಲಿರುವ ಸ್ವಿಮ್ಮಿಂಗ್ ಪೂಲ್ ನಲ್ಲಿ ಆಟವಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ತೆರಳಿದ್ದು, ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!