ಕಾರ್ಕಳ: ಹಿರಿಯ ಕಾಂಗ್ರೆಸ್ ನಾಯಕ, ಬಿಲ್ಲವ ಮುಖಂಡ ಡಿ. ಆರ್.ರಾಜು ಇನ್ನಿಲ್ಲ
ಕಾರ್ಕಳ: ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಹಾಗೂ ರಶ್ಮಿ ಕನ್ಸ್ಟ್ರಕ್ಷನ್ ಮಾಲೀಕ ಡಿ. ಆರ್. ರಾಜು ಪೂಜಾರಿ (64) ಹೃದಯಾಘಾತಕ್ಕೆ ಒಳಗಾಗಿ ಭಾನುವಾರ ರಾತ್ರಿ ನಿಧನರಾಗಿದ್ದಾರೆ.
ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನಲ್ಲೆಯಲ್ಲಿ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ವೈದಕೀಯ ಪರೀಕ್ಷೆಯಿಂದ ಅವರು ಮೃತಪಟ್ಟಿರುವುದು ದೃಢ ಪಟ್ಟಿದೆ ಎನ್ನಲಾಗಿದೆ.
ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ಅವರ ಸಾಧನೆ ಅಪಾರವಾದುದು. ಅವರ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಭಾನುವಾರ ಬೆಳಿಗ್ಗೆನಿಂದಲೇ ಅವರು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು ಎನ್ನಲಾಗಿದೆ.
ಅವರ ಅಗಲುವಿಕೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟವಾಗಿದ್ದು ಡಿ.ಆರ್ ರಾಜು ಅವರ ಆತ್ಮಕ್ಕೆ ಶಾಂತಿ ಕೋರುತ್ತಾ ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ. ರಮೇಶ್ ಕಾಂಚನ್
ಅಧ್ಯಕ್ಷರು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ