ಕಾಂತಾರ ಚಿತ್ರದ ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ- ಹಲವರಿಗೆ ಗಾಯ

ಉಡುಪಿ: ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವು ಮಂದಿ‌ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ರವಿವಾರ ರಾತ್ರಿ ವೇಳೆ ನಡೆದಿದೆ.

ಮುದೂರಿನಲ್ಲಿ ಕಾಂತಾರ ಸಿನೆಮಾ ನೃತ್ಯ ಚಿತ್ರೀಕರಣ ಮುಗಿಸಿ ಸುಮಾರು 20ಕ್ಕೂ ಮಿಕ್ಕಿ ಕಿರಿಯ ನೃತ್ಯ ಕಲಾವಿದರು ತಮ್ಮ ವಸತಿಗೃಹಕ್ಕೆ 407 ಬಸ್‌ನಲ್ಲಿ ವಾಪಾಸಾಗಿತ್ತಿದ್ದ ವೇಳೆ ಚಾಲಕ ಎದುರಿಗೆ ಬಂದ ಬೈಕ್ ಅನ್ನು ತಪ್ಪಿಸುವ ಭರದಲ್ಲಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ‌. ಗಾಯಗೊಂಡ ಹಲವು ಕಲಾವಿದರಿಗೆ ಜಡ್ಕಲ್ ಮಹಾಲಕ್ಷ್ಮೀ ಕ್ಲಿನಿಕ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬಸ್ ಚಾಲಕನಿಗೆ ಥಳಿಸಿದ ಕಲಾವಿದರು
ಚಾಲಕ ಮೊಬೈಲ್ ಬಳಕೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎಂದು ಆರೋಪಿಸಿ ಬಸ್ ಪಲ್ಟಿಯಾದ ಬಳಿಕ ಉಪ್ಪುಂದ ಮೂಲದ ಟೂರಿಸ್ಟ್ ಬಸ್ ಚಾಲಕನಿಗೆ ಕಲಾವಿದರು ಥಳಿಸಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಟೂರಿಸ್ಟ್ ಚಾಲಕ ಸಂಘದ ಸದಸ್ಯರು ಸ್ಥಳಕ್ಕೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಕೆಲಹೊತ್ತು ಸ್ಥಳದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿತ್ತು.

Leave a Reply

Your email address will not be published. Required fields are marked *

error: Content is protected !!