ನ.30ಕ್ಕೆ ಮಣಿಪಾಲ ಆರೋಗ್ಯ ಕಾರ್ಡ್ ನೋಂದಾವಣೆಗೆ ಕೊನೆಯ ದಿನ

ಮಣಿಪಾಲ, ನ.25: ಮಣಿಪಾಲ ಆರೋಗ್ಯಕಾರ್ಡ್ 2024 ರ ನೋಂದಾವಣೆಗೆ ಐದು ದಿನ ಬಾಕಿ ಇದ್ದು ನ. 30ಕ್ಕೆ ಕೊನೆಯ ದಿನ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.

ಇದು ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡ್‌ನ ದ್ಯೇಯ ವಾಕ್ಯ.

ಮಣಿಪಾಲ್ ಆರೋಗ್ಯ ಕಾರ್ಡ್‌ದಾರರು ತಜ್ಞ ಮತ್ತು ಸೂಪರ್ ಸ್ಪೆಷಲಿಸ್ಟ್ ವೈದ್ಯರೊಂದಿಗೆ ಸಮಾಲೋಚನೆ ಶುಲ್ಕದಲ್ಲಿ 50% ರಿಯಾಯಿತಿ, ರೋಗನಿರ್ಣಯ ಮತ್ತು ಪ್ರಯೋಗಾಲಯ ಪರೀಕ್ಷೆ ಸೇವೆಯಲ್ಲಿ 25% ರಿಯಾಯಿತಿ, ರೇಡಿಯಾಲಜಿ, ಹೊರರೋಗಿ ಕಾರ್ಯ ವಿಧಾನಗಳು ಮತ್ತು ಮಧುಮೇಹ ಪಾದದ ಆರೈಕೆಯಲ್ಲಿ 20% ರಿಯಾಯಿತಿ, ಡಯಾಲಿಸಿಸ್‌ನಲ್ಲಿ ₹ 100 ರಿಯಾಯಿತಿ, ಆಸ್ಪತ್ರೆಯ ಔಷಧಿಗಳ ಮೇಲೆ10% ವರೆಗೆ ರಿಯಾಯಿತಿ ಮತ್ತು ಜನರಲ್ ವಾರ್ಡ್‌ನಲ್ಲಿ ಒಳರೋಗಿಗಳ ಬಿಲ್‌ಗಳಲ್ಲಿ (ಕಾನ್ಸುಮಬೆಲ್ಸ್ ಮತ್ತು ಪ್ಯಾಕೇಜ್‌ಗಳನ್ನು ಹೊರತುಪಡಿಸಿ) 25% ರಿಯಾಯಿತಿ ಸೌಲಭ್ಯವಿದೆ.

ಮಣಿಪಾಲ್ ಆರೋಗ್ಯ ಕಾರ್ಡ್ 2024ರ ಯೋಜನೆಯು “ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 350, ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ರೂ700 ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 900. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 600, ಕುಟುಂಬಕ್ಕೆ ₹ 950 ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ₹ 1100 ಆಗಿರುತ್ತದೆ.

ಮಣಿಪಾಲ, ಮಂಗಳೂರು ಮತ್ತು ಇತರ ಆಸ್ಪತ್ರೆಗಳಲ್ಲಿನ ರಿಯಾಯಿತಿ ಸೌಲಭ್ಯ ಮತ್ತು ಸ್ವಯಂ ನೋಂದಾವಣೆಗೆ, www.manipalhealthcard.com ಗೆ ಭೇಟಿ ನೀಡಿ ಅಥವಾ 9980854700 / 08202923748 ಅನ್ನು ಸಂಪರ್ಕಿಸಿ. ಎಲ್ಲಾ ನಮ್ಮ ಅಧಿಕೃತ ಪ್ರತಿನಿಧಿಗಳ ಮೂಲಕ ನೋಂದಣಿ ಮಾಡಬಹುದು.

Leave a Reply

Your email address will not be published. Required fields are marked *

error: Content is protected !!