ಕನ್ನಡ ಉಪನ್ಯಾಸಕ ಭರತ್ ರಾಜ್ ಕೆ.ಎನ್ ರಾಜ್ಯೋತ್ಸವ ಪ್ರಶಸ್ತಿ
ಕಾರ್ಕಳ: ಮಿಯ್ಯಾರಿನ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಕನ್ನಡ ಭಾಷಾ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಭರತ್ ರಾಜ್ ಕೆ. ಎನ್ ರವರು ಕರುನಾಡ ಕನ್ನಡ ಕಲಾ ಸಿರಿ ಬಳಗ ಬೆಂಗಳೂರು ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನಾರಾಗಿದ್ದಾರೆ.
ಇವರ ಕನ್ನಡ ಸೇವೆ. ಕಲೆ ಮತ್ತು ಶಿಕ್ಷಣ ಕ್ಷೇತ್ರ ಮುಂತಾದವುಗಳನ್ನು ಪರಿಗಣಿಸಿ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.
ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದ ಕನ್ನಡ ಉಪನ್ಯಾಸಕರನ್ನು ಕಾಲೇಜಿನ ಪ್ರಾಂಶುಪಾಲರಾದ ಗಾಯನ ಎಂ ಶೆಟ್ಟಿ, ಉಪನ್ಯಾಸಕ ವೃಂದದವರು , ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದರು.