‘ಬ್ರಹ್ಮಗಂಟು’ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆ
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ನಟಿ ಶೋಭಿತಾ ಶಿವಣ್ಣ ಹೈದರಾಬಾದಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೂಲತ: ಹಾಸನ ಜಲ್ಲೆ ಸಕಲೇಶಪುರದ ಶೋಭಿತಾ ಶಿವಣ್ಣ, ಬ್ರಹ್ಮಗಂಟು ಧಾರಾವಾಹಿಯಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳುವ ಮೂಲಕ ಸಾಕಷ್ಟು ಅಭಿಮಾನಿಗಳ ನ್ನು ಸಂಪಾದಿಸಿದ್ದಾರೆ.
ಮೇ 22, 2023 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಶೋಭಿತಾ ಕಿರುತೆರೆಯಿಂದ ದೂರವಾಗಿ ಹೈದರಾಬಾದ್ ನಲ್ಲಿ ವಾಸವಾಗಿದ್ದರು. ಆದರೆ, ಮಧ್ಯರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಆರಂಭದಲ್ಲಿ ರಾಜ್ ಮ್ಯೂಸಿಕ್ ಚಾನೆಲ್ ನಲ್ಲಿ VJ ಆಗಿದ್ದ ಶೋಭಿತಾ, ನಂತರ ಬ್ರಹ್ಮಗಂಟು, ನಿನ್ನಿಂದಲೇ ಧಾರಾವಾಹಿಯಲ್ಲಿ ಅಭಿನಯಿಸಿದ್ದರು.2015ರಲ್ಲಿ ಕುಮಾರ್ ದತ್ತ ಅವರೊಂದಿಗೆ ಎರಡೊಂದ್ಲಾ ಮೂರು ಹಾಗೂ “ಫಸ್ಟ್ ಡೇ, ಫಸ್ಟ್ ಷೋ” ಸಿನಿಮಾದಲ್ಲಿ ನಾಯಕಿಯಾಗಿ ಬಣ್ಣ ಹಚ್ಚಿದ್ದರು.