ಮಣಿಪಾಲ: ಇಲೆಕ್ಟ್ರಿಶಿಯನ್ ನೇಣಿಗೆ ಶರಣು
ಮಣಿಪಾಲ, ಡಿ.2: ಜೀವನದಲ್ಲಿ ಜಿಗುಪ್ಸೆಗೊಂಡ ಇಲೆಕ್ಟ್ರಿಶಿಯನ್ ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಕಂಚಿನಬೈಲು ಎಂಬಲ್ಲಿ ನಡೆದಿದೆ.
ಮೃತರನ್ನು ಕಂಚಿನಬೈಲಿನ ಸುರೇಶ್ ಎಂದು ಗುರುತಿಸಲಾಗಿದೆ. ವಿಪರೀತ ಕುಡಿತದ ಚಟ ಹೊಂದಿದ್ದ ಇವರು, ನ.29ರಂದು ಮನೆಯಲ್ಲಿ ಗಲಾಟೆ ಮಾಡಿ ಹೋಗಿದ್ದು, ನಂತರ ನಾಪತ್ತೆಯಾಗಿದ್ದ ಸುರೇಶ್‌ಗೆ ಹುಡುಕಾಟ ನಡೆಸಿದಾಗ ಡಿ.1ರಂದು ಮನೆ ಸಮೀಪ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂತು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.