ಮಾಜಿ ಸಚಿವ ಸೊರಕೆ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ- ಪ್ರಕರಣ ದಾಖಲು
ಉಡುಪಿ, ಡಿ.8: ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದಿರುವ ವಿರುದ್ಧ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಕ್ಷದ ನಾಯಕರಾದ ವಿನಯ ಕುಮಾರ್ ಸೊರಕೆ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಗಳು ನಕಲಿ ಫೇಸ್‌ಬುಕ್ ಖಾತೆಯನ್ನು ಸೃಷ್ಟಿಸಿ, ಅದರ ಪ್ರೊಫೈಲ್‌ಗೆ ವಿನಯ ಕುಮಾರ್ ಸೊರಕೆ ಅವರ ಫೋಟೋವನ್ನು ದುರ್ಬಳಕೆ ಮಾಡಿದ್ದಾರೆ. ಈ ಮೂಲಕ ಸೊರಕೆ ಅವರ ವೈಯಕ್ತಿಕ ಗೌರವಕ್ಕೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ ಈ ಖಾತೆಯನ್ನು ತೆರೆದು ಸಂದೇಶವನ್ನು ಕಳುಹಿಸುತ್ತಿರುವ ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂ ತೆ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸೌರಭ್ ಬಲ್ಲಾಳ್ ದೂರಿನಲ್ಲಿ ತಿಳಿಸಿದ್ದಾರೆ.