ಪಟಾಕಿ ಅಂಗಡಿಗೆ ಅಧಿಕಾರಿಗಳ ದಿಢೀರ್ ದಾಳಿ
ಮಂಗಳೂರು: ಈ ಬಾರಿ ದೀಪಾವಳಿಗೆ ಪಟಾಕಿ ನಿಷೇಧಿಸಬೇಕೆಂಬ ಒತ್ತಾಯದ ನಡುವೆಯೂ ರಾಜ್ಯ ಸರ್ಕಾರ ಹಸಿರು ಪಟಾಕಿ ಉರಿಸಲು ಅವಕಾಶ ನೀಡಿತ್ತು. ಅದರಂತೆ, ಹೆಚ್ಚು ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿ ಉರಿಸದಂತೆ ಆದೇಶಿಸಿತ್ತು , ರಾಜ್ಯ ಸರಕಾರ ಮತ್ತು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಅಧಿಕಾರಿಗಳು ಪಟಾಕಿ ಅಂಗಡಿಗಳಿಗೆ ದಾಳಿ ನಡೆಸಿದ್ದಾರೆ.
ಮಂಗಳೂರು ನಗರ, ಉಳ್ಳಾಲ ಮತ್ತು ಕೋಟೆಪುರದ ವಿವಿಧೆಡೆ ಹಾಕಿದ್ದ ಪಟಾಕಿ ಸ್ಟಾಲ್ ಗಳಿಗೆ ದಿಢೀರ್ ದಾಳಿ ನಡೆಸಿರುವ ಅಧಿಕಾರಿಗಳು ಯಾವೆಲ್ಲಾ ಪಟಾಕಿಗಳನ್ನು ಮಾರಾಟಕ್ಕಿಟ್ಟಿದ್ದಾರೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಪರಿಶೀಲನೆ ನಡೆಸಿದ್ದಾರೆ.