ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಧನ್ವಿ ಮರವಂತೆಗೆ ಚಿನ್ನದ ಪದಕ
ಬೈಂದೂರು: ಥಾಯ್ಲೆಂಡ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ವರ್ಷಿಣಿ ಯೋಗ ಎಜ್ಯುಕೇಶನ್ ಆಂಡ್ ಕಲ್ಬರಲ್ ಸ್ಪೋರ್ಟ್ಸ್ ಟ್ರಸ್ಟ್ ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಭಾರತದಿಂದ ಪ್ರತಿನಿಧಿಸಿ ಚಿನ್ನದ ಪದಕ ಗಳಿಸಿದ್ದಾಳೆ.
ಪೋಷಕರು, ಊರಿನವರು ಹಾಗೂ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.