ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಥಮ ಸಭೆ
ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ: ರಮೇಶ್ ಕಾಂಚನ್
ಉಡುಪಿ: ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಥಮ ಸಭೆಯು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಡುಪಿ ತಾಲೂಕು ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆಯಲ್ಲಿ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆಯಿತು.
ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಡುಪಿ ತಾಲೂಕು ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಸರಕಾರದ ಮಹತ್ವಾಕಾಂಕ್ಷೆಯ ಈ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಮಿತಿಯವರು ಒಟ್ಟಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುವ ಅಗತ್ಯವಿದೆ. ಮುಂದಿನ ಸಭೆಯಲ್ಲಿ ಎಲ್ಲ ಇಲಾಖಾ ಅಧಿಕಾರಿಗಳು ದಾಖಲೆಯೊಂದಿಗೆ ಸಭೆಗೆ ಹಾಜರಾಗಬೇಕು. ಸಭೆಗೆ ಹಾಜರಾಗದ ಅಧಿಕಾರಿಗಳ ಬಗ್ಗೆ ಡಿಸಿಗೆ ದೂರು ನೀಡಲಾಗುವುದು ಎಂದರು.
ಸೇವಾ ಸಿಂಧು ಪೊರ್ಟಲ್ ಮೂಲಕ ಒಂದು ವರ್ಷದಲ್ಲಿ ಸರಾಸರಿ 200 ಯೂನಿಟ್ ಒಳಗಿನ ವಿದ್ಯುತ್ ಬಳಸುವ ಬಳಕೆದಾರರು ಗೃಹ ಜ್ಯೋತಿ ಯೋಜನೆಯಡಿ ಅರ್ಜಿ ಸಲ್ಲಿಸಬಹುದು. 200 ಕ್ಕಿಂತ ಹೆಚ್ಚು ಯೂನಿಟ್ ಬಳಸುವ ಗ್ರಾಹಕರಿಗೆ ಯೋಜನೆ ಅನ್ವಯ ಆಗುವುದಿಲ್ಲ ಎಂದು ಮೆಸ್ಕಾಂ ಅಧಿಕಾರಿ ತಿಳಿಸಿದರು.