ಲಂಚ ಸ್ವೀಕಾರ ಆರೋಪ ಸಾಬೀತು: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ
ಮಂಗಳೂರು: ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಕೈಗೆ ಸಿಲುಕಿದ ಆರೋಪಿ ಪಿಡಿಒಗೆ ಮಂಗಳೂರಿನ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 3 ವರ್ಷದ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದೆ.
ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯತ್ ಪಿಡಿಒ ಪ್ರೇಮ್ ಸಿಂಗ್ ನಾಯ್ಕ್ ಶಿಕ್ಷೆಗೊಳಗಾದವರು. 2019ರ ಜೂ.3ರಂದು ವ್ಯಕ್ತಿಯೊಬ್ಬರಿಂದ 9 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ದಾಳಿ ನಡೆಸಿದ್ದರು.
ಪೊಲೀಸ್ ನಿರೀಕ್ಷಕ ಸೋಮಶೇಖರ್ ತನಿಖೆ ನಡೆಸಿದ್ದರೆ, ಸರಕಾರದ ಪರವಾಗಿ ರವೀಂದ್ರ ಮನ್ನಿಪ್ಪಾಡಿ ವಾದಿಸಿದ್ದರು.