ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಬಂಧನ

ಬೆಂಗಳೂರು: ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಕಡೆಗೂ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಹಳ ದಿನಗಳಿಂದ ತಲೆ ಮರೆಸಿಕೊಂಡಿದ್ದ ಸಂಪತ್ ರಾಜ್ ಸೆರೆಗಾಗಿ ಸಿಸಿಬಿ ಐದು ತಂಡಗಳನ್ನು ರಚಿಸಿದ್ದು, ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಕೂಡಾ ಸಂಪತ್ ರಾಜ್ ಗಾಗಿ ಹುಡುಕಾಟ ನಡೆಸಲಾಗಿತ್ತು.

ಮಂಗಳವಾರವಷ್ಟೇ ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ರನ್ನು ಸಿಸಿಬಿ ಪೊಲೀಸರು ಬಂಧಿಸಿ ಆತ ನೀಡಿದ ಸುಳಿವಿನ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರ ಬಲೆಗೆ ಸಂಪತ್ ರಾಜ್ ಬಿದ್ದಿದ್ದು, ಅಂತಿಮವಾಗಿ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವಿವಾದಿತ ಪೋಸ್ಟ್ ವೊಂದಕ್ಕೆ ಸಂಬಂಧಿಸಿದಂತೆ ಆಗಸ್ಟ್ 11 ರಂದು ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಭೆ ಸೃಷ್ಟಿಯಾಗಿತ್ತು. ಏಕಾಏಕಿ ಬಂದಿದ್ದ 300 ಮಂದಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಅವರ ಸಹೋದರಿಯ ಮನೆಯ ಮೇಲೆ ದಾಳಿ ನಡೆಸಿದ್ದರು. ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯ ಮೇಲೂ ದಾಳಿ ನಡೆಸಿ ಧ್ವಂಸಗೊಳಿಸಿದ್ದರು. ಈವೇಳೆ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಈವರೆಗೂ 421 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!