ಉದ್ಯಾವರ: ಸ್ನೇಹಿತನ ಹೆಸರಿನಲ್ಲಿ ಕ್ರಿಕೆಟ್ ತಂಡ ಕಟ್ಟಿದ್ದ ಯುವಕ ನೇಣಿಗೆ ಶರಣು- ಕಾರಣ ನಿಗೂಢ

ಉಡುಪಿ: ಉದ್ಯಾವರ ಬೊಳ್ಜೆ ನಿವಾಸಿ ಆದಿತ್ಯ (24) ಎಂಬವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೆರಂಪಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಹೊನಲುಬೆಳಕಿನ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಬಳಿಕ ಮನೆಗೆ ಬಂದ ಆದಿತ್ಯ ಅವರು ಮುಂಜಾನೆ 4 ಗಂಟೆಯ ಸುಮಾರಿಗೆ ನೇಣಿಗೆ ಶರಣಾಗಿದ್ದಾರೆ ಎಂದು‌ ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದಿತ್ಯ ಅವರು ಕಳೆದ ವರ್ಷ ಅಪಘಾತದಲ್ಲಿ ನಿಧನರಾಗಿದ್ದ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್ ತಂಡವೊಂದನ್ನು ಕಟ್ಟಿದ್ದರು. ಮನೆಯಲ್ಲಿ ಚಿಕ್ಕಮ್ಮನೊಂದಿಗೆ ವಾಸವಾಗಿರುವ ಆದಿತ್ಯ, ತನ್ನ ಸ್ನೇಹಿತ ನಿಧನ ಬಳಿಕ ಖಿನ್ನತೆಗೆ ಒಳಗಾಗಿದ್ದ ಎಂದು ಆತನ ಗೆಳೆಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!