ಕಡೆಕಾರ್: ರಕ್ತದಾನ ಶಿಬಿರ ಉದ್ಘಾಟನೆ
ಉಡುಪಿ: ಕಡೆಕಾರು ಶ್ರೀವಿಠೋಭ ರುಕ್ಮಯಿ ಭಜನಾ ಮಂದಿರ, ಶ್ರೀ ಬ್ರಹ್ಮ ಬೈದರ್ಕಳ ಧೂಮಾವತಿ ಯಕ್ಷಗಾನ ಕಲಾ ಮಂಡಳಿ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಜಿಲ್ಲಾಸ್ಪತ್ರೆ ರಕ್ತ ನಿಧಿ ವಿಭಾಗ ಇದರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವು ಕಡೆಕಾರು ಶ್ರೀ ವಿಠೋಭ ರುಕ್ಮಯಿ ಭಜನಾ ಮಂದಿರ ವಠಾರದಲ್ಲಿ ನಡೆಯಿತು.
ಉಡುಪಿ ನಗರ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಇವತ್ತು ಜಿಲ್ಲಾ ಸರಕಾರಿ ಆಸ್ಪತ್ರೆಯ ಜೊತೆ ಸೇರಿ ರಕ್ತದಾನ ಶಿಬಿರವನ್ನು ಏರ್ಪಡಿಸಿರುವುದು ಶ್ಲಾಘನೀಯ, ಇದರಿಂದ ಜಿಲ್ಲಾಸ್ಪತ್ರೆಗೆ ಬರುವ ರಕ್ತದ ಅವಶ್ಯಕತೆ ಇರುವ ಬಡರೋಗಿಗಳಿಗೆ ಸಹಾಯವಾಗುತ್ತದೆ ಎಂದರು.
ಇನ್ನೊಬ್ಬ ಮುಖ್ಯ ಅತಿಥಿ ಸುನೀಲ್ ಸಾಲ್ಯಾನ್ ಕಡೆಕಾರ್ ಅವರು ಮಾತನಾಡಿ ಸಂಘ ಸಂಸ್ಥೆಗಳಿಂದ ಧಾರ್ಮಿಕ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮದೊಂದಿಗೆ ಇಂತಾಹ ಸಾಮಾಜಿಕ ಕಾರ್ಯಕ್ರಮಗಳು ನಡೆದಾಗ ಸಂಘ ಸಂಸ್ಥೆಗಳ ಕೆಲಸಕ್ಕೆ ಹೆಚ್ಚಿನ ಅರ್ಥ ಬರುತ್ತದೆ ಎಂದರು.
ಅಭಯ ಹಸ್ತೆ ಚಾರಿಟೇಬಲ್ ಟ್ರಸ್ಟ್ ನ ಸತೀಶ್ ಸಾಲ್ಯಾನ್ ಅವರು ಉಡುಪಿಯಲ್ಲಿ ಪ್ರಸ್ತುತ ರಕ್ತದ ಬೇಡಿಕೆ ಮತ್ತು ತಮ್ಮ ಸಂಸ್ಥೆ ಇದಕ್ಕಾಗಿ ಸ್ಪಂದಿಸುತ್ತಿರುವ ಬಗ್ಗೆ ತಿಳಿಸಿದರು.
ಜಿಲ್ಲಾ ರಕ್ತನಿಧಿ ವಿಭಾಗದ ಡಾ.ಕಾವ್ಯ, ಶ್ರೀ ವಿಠೋಭ ರುಕ್ಮಯಿ ಭಜನಾ ಮಂದಿರದ ಅಧ್ಯಕ್ಷರಾದ ದಿನೇಶ್ ಜೆ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಶ್ರೀ ಬ್ರಹ್ಮ ಬೈದರ್ಕಳ ಧೂಮಾವತಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾದ ರಾಜೇಶ್ ಪಾಲನ್ ಸ್ವಾಗತಿಸಿದರು, ಶ್ರೀವಿಠೋಭ ರುಖುಮಾಯಿ ಭಜನಾ ಮಂದಿರದ ಕಾರ್ಯದರ್ಶಿ ತಾರಾನಾಥ್ ಮೆಂಡನ್ ವಂದಿಸಿದರು. ವಿಕಾಸ್ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.