ಬಡಗಬೆಟ್ಟು ಸೊಸೈಟಿಗೆ 6ನೇ ಬಾರಿ “ರಾಜ್ಯ ಮಟ್ಟದ ಅತ್ಯುತ್ತಮ ಸಹಕಾರಿ ಸಂಘ” ಪ್ರಶಸ್ತಿ

ಮಂಗಳೂರು: ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಭಾನುವಾರ ರಾಜ್ಯ ಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಬಡಗಬೆಟ್ಟು ಕ್ರೆಡಿಟ್ ಕೋ-ಆಪ್ ಸೊಸೈಟಿಗೆ 6ನೇ ಬಾರಿ “ರಾಜ್ಯ ಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ”ವಿತರಿಸಿದರು.

ಸಂಘದ ಆಡಳಿತ ನಿರ್ದೇಶಕರಾದ ವಿನಯಕುಮಾರ್ ಟಿ.ಎ, ಜಯ ಶೆಟ್ಟಿ ಸಂಘದ ಸಹಾಯಕ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಎಸ್ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಲೋಕಸಭಾ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ , ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ , ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹಾಗೂ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ದ.ಕ ಹಾಗೂ ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ. ನಾಯಕ್ ಉಪಸ್ಥಿತರಿದ್ಧರು.

Leave a Reply

Your email address will not be published. Required fields are marked *

error: Content is protected !!